29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

ಬಂದಾರು :ಬಂದಾರು ಗ್ರಾಮ ಪಂಚಾಯತ್ ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಮಾ 11 ರಂದು ನಡೆಯಿತು.


ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಮತ್ತು ಸಿದ್ಧಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಹಾಲಕ್ಷ್ಮಿ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎನ್ಆರ್.ಎಲ್.ಎಮ್ ಬೆಳ್ತಂಗಡಿ ತಾ ಪಂ ನ ವಲಯ ಮೇಲ್ವಚಾರಕಿ ವೀಣಾ ಎನ್ಆರ್.ಎಲ್.ಎಮ್ ಸಂಜೀವಿನಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ನಂತರ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ರಾಜ್ಯ ಮಟ್ಟದ ಸಾಹಿತ್ಯ ಕ್ಷೇತ್ರದಲ್ಲಿ ಕವನ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಧೃತಿ . ಎನ್.ಡಿ ಇವರಿಗೆ ಗ್ರಾ . ಪಂ ಹಾಗೂ ಒಕ್ಕೂಟದ ವತಿಯಿಂದ ಸನ್ಮಾನ ಮಾಡಲಾಯಿತು.

ನೂತನ ಪದಾಧಿಕಾರಿಗಳ ಪದಗ್ರಹಣವನ್ನು ತಾಲೂಕು ಪಂಚಾಯತ್ ನ ಎನ್ಆರ್.ಎಲ್.ಎಮ್ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ನೆರವೇರಿಸಿಕೊಟ್ಟರು . ಮಾಜಿ ಪದಾಧಿಕಾರಿಗಳಿಗೆ ಗೌರವ ಸ್ಮರಣಿಕೆ ನೀಡಿ ಬೀಳ್ಕೊಡುಗೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು,ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾವತಿ ಹಾಗೂ ಗ್ರಾ.ಪಂ ನ ಸದಸ್ಯರು. ಮತ್ತು ಸಂಜೀವಿನಿ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದರು.

ಎಲ್.ಸಿ.ಆರ್.ಪಿ ಭಾಗ್ಯಶ್ರೀ ನಿರೂಪಿಸಿ, ಪ್ರಾರ್ಥಿಸಿದರು, ಎಂಬಿಕೆ ಮೇಘನ ರವರು ಸ್ವಾಗತಿಸಿದರು , ಎಲ್.ಸಿ.ಆರ್.ಪಿ ಪವಿತ್ರ ಜಮಾ-ಖರ್ಚು ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು .ಎಮ್.ಬಿ.ಕೆ ಮೇಘನ ವಾರ್ಷಿಕ ವರದಿ ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು. ಬಿ.ಸಿ ಸಖಿ ಲಕ್ಷ್ಮೀ ವಂದಿಸಿದರು .

Related posts

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya
error: Content is protected !!