March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರಕ್ಕೆ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅಳವಡಿಸಿದ ಹೈ ಮಾಸ್ಕ್ ದೀಪದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು.

ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಅಭಿವೃದ್ಧಿಗೆ ಕೈ ಜೋಡಿಸಿದ ಪ್ರತಾಪ ಸಿಂಹ ನಾಯಕ್ ಅವರಿಗೆ ಕೃತಜ್ಞತೆಯನ್ನು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್, ಉಪಾಧ್ಯಕ್ಷರಾದ ಯಶೋಧರ ಶೆಟ್ಟಿ,
ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ, ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಪ್ರಮುಖರಾದ ಹೆಚ್.ಧರ್ಣಪ್ಪ ಪೂಜಾರಿ,ಕೆ.ವಸಂತ ಸಾಲಿಯಾನ್,ಮೋಹನ್ ಕುಮಾರ್ ಉಜಿರೆ, ರಾಜೀವ ಮುಂಡೂರು ,ಜಯ ಪೂಜಾರಿ ಹಾಗೂ ಸಂಘದ ನಿರ್ದೇಶಕರುಗಳು, ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!