April 1, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ‌.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕಾರ್ಯದರ್ಶಿಯಾಗಿದ್ದ ಕಾಸಿಂ ಬಾರ್ಕೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ.
ಕೇಂದ್ರ ಸಮಿತಿ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರ ಅಧ್ಯಕ್ಷತೆಯಲ್ಲಿ ಕಂಕನಾಡಿ ಕೇಂದ್ರ ಕಚೇರಿಯಲ್ಲಿ ನಡೆದ ಉಭಯ ಜಿಲ್ಲಾ ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ.


ಅಬ್ಬೋನು ಮದ್ದಡ್ಕ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕೋಶಾಧಿಕಾರಿಯಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಶಿಕ್ಷಣ, ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ತಮ್ಮನ್ನು ಪೂರ್ಣವಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya
error: Content is protected !!