29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಬೆಳ್ತಂಗಡಿ:ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆಯು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಗೌರವ ಸಲಹೆಗಾರರಾಗಿ ಬೆಳ್ತಂಗಡಿಯಲ್ಲಿ ಹಲವಾರು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶಾಸಕರಾದ ಹರೀಶ್ ಪೂಂಜ, ಅಧ್ಯಕ್ಷರಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರು, ಕಾರ್ಯದಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುವ ಯುವ ನಾಯಕ ಲ| ನಿತ್ಯಾನಂದ ಎನ್ ನಾವರ ಯೋಗಕ್ಷೇಮ, ಪ್ರಧಾನ ಕಾರ್ಯದರ್ಶಿಯಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಯುವ ಮುಂದಾಳು ಸಂತೋಷ್ ಕುಮಾರ್ ಕಾಪಿನಡ್ಕ ಹಾಗೂ ಕೋಶಾಧಿಕಾರಿಯಾಗಿ ಸೋಮನಾಥ್ ರಾಜಪಾದೆ ಆಯ್ಕೆಯಾಗಿದ್ದಾರೆ.

ಸಮಿತಿ ಉಪಾಧ್ಯಕ್ಷರಾಗಿ ನಿತ್ಯಾನಂದ ಶೆಟ್ಟಿ ನೊಚ್ಚ,ರಾಕೇಶ್ ಹೆಗ್ಡೆ ಬಳಂಜ,ನವೀನ್ ಕೆ ಸಾಮಾನಿ ಕರಂಬಾರು, ಸದಾನಂದ ಪೂಜಾರಿ ಉಂಗೀಲಬೈಲು, ಸುರೇಶ್ ಶೆಟ್ಟಿ ಕುರೆಲ್ಯ ನಾಲ್ಕೂರು, ಹೇಮಂತ್ ತೆಂಕಕಾರಂದೂರು, ಸುಂದರ ಶೆಟ್ಟಿ ಸುಲ್ಕೇರಿ,ಉಮೇಶ್ ದುಗ್ಗಲಚ್ಚಿಲ್ ಪಿಲ್ಯ,ಆನಂದ ಸಾಲಿಯಾನ್ ಓಡಿಮಾರು,ಶುಭಕರ ಪೂಜಾರಿ ಕುದ್ಯಾಡಿ,ವೀರೇಂದ್ರ ಕುಮಾರ್ ರಾಜಪಾದೆ ಹಾಗೂ ಜೊತೆ ಕಾರ್ಯದರ್ಶಿಯಾಗಿ ಪ್ರಶಾಂತ್ ಹಿಮರಡ್ಡ ನಾವರ ಆಯ್ಕೆಯಾಗಿದ್ದಾರೆ. ವಿವಿಧ ಸಮಿತಿಗಳನ್ನು ಇಗಾಗಲೇ ರಚಿಸಲಾಗಿದೆ.

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವವು ಮಾ.31 ರಿಂದ ಎ. 04 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ತಿಳಿಸಿದರು.

Related posts

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
error: Content is protected !!