29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ತೋಟತ್ತಾಡಿ ಇದರ ವತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟವು ಸಂಘದ ವಠಾರ ಕೃಷ್ಣ ನಗರದಲ್ಲಿ ಗ್ರಾಮದ ಗುರಿಕಾರರಾದ ಕೃಷ್ಣಪ್ಪ ಗೌಡ ಅಗರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೊರಗಪ್ಪ ಗೌಡ ಅರಣೆಪಾದೆ, ಚಾರ್ಮಾಡಿ ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ತೋಟತ್ತಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನಿರ್ದೇಶಕರಾದ ಜಯಂತಿ ಕುಶಾಲಪ್ಪ ಗೌಡ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಸುರೇಖಾ ಪ್ರಸಾದ್ ಮಡೀರು, ರಾಮಣ್ಣ ಗೌಡ ಏಡಿಯಾರು, ನೀಲಯ್ಯ ಗೌಡ ಮಡೀರು, ಕೃಷ್ಣಪ್ಪ ಗೌಡ ಜಾಕೇಡಿ ಉಪಸ್ಥಿತರಿದ್ದರು.

ಪುರುಷರಿಗೆ ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು.

ಸಂಜೆ ಸಮಾರೋಪ ಸಮಾರಂಭವು ಸಂಘದ ಅಧ್ಯಕ್ಷರಾದ ಗೋಪಾಲಕೃಷ್ಣ ಗೌಡ ಮಡೀರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷರಾದ ನಾರಾಯಣ ಗೌಡ, ಯುವ ವೇದಿಕೆ ಅಧ್ಯಕ್ಷರಾದ ನವೀನ್ ಗೌಡ ಬಾಯಿತ್ಯಾರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya
error: Content is protected !!