29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಮಾ.11ರಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ವಂದನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ಕಾಮತ್ ರವರು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮಿಣ ಮಹಿಳೆಯರ ಕೌಶಲ್ಯಾಭಿವೃದ್ಧಿಯಡಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ದೆಹಲಿಗೆ ಹೋದ ಮೇಲಂತಬೆಟ್ಟು ಗ್ರಾಮದ ಶ್ರೀಮತಿ ಲಕ್ಷ್ಮೀ ಇವರನ್ನು ಸನ್ಮಾನಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಚ್ಚಿನ ಮಹಿಳೆಯರು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya
error: Content is protected !!