30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆ ಇಂದು ನಡೆದಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ವ್ಯವಸ್ಥೆ ಇಲ್ಲದ ಪರದಾಟ ನಡೆಸುತ್ತಿರುವುದು ಬಸ್‌ನಿಲ್ದಾಣಗಳಲ್ಲಿ ಕಂಡು ಬಂದಿದೆ.


ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳಿದ್ದರೂ, ಶಿಕ್ಷಣ ಇಲಾಖೆ ಹಾಗೂ ಸರಕಾರ ರೂಪಿಸಿರುವ ನಿಯಮದ ಪ್ರಕಾರ ಅವರಿಗೆ ಅಲ್ಲಿ ಪರೀಕ್ಷೆಗೆ ಅವಕಾಶ ನೀಡದೆ ಬೇರೆ ಕಾಲೇಜುಗಳಲ್ಲಿ ಪರೀಕ್ಷೆ ಬರೆಯುವ ಅನಿವಾರ್ಯತೆ ಇದೆ. ಉಜಿರೆ,ಮುಂಡಾಜೆ,ಕಕ್ಕಿಂಜೆ,ಚಾರ್ಮಾಡಿ,ದಿಡುಪೆ ಮೊದಲಾದ ಕಡೆಗಳ ವಿದ್ಯಾರ್ಥಿಗಳು ಬೆಳ್ತಂಗಡಿ, ಪುಂಜಾಲಕಟ್ಟೆ ಮೊದಲಾದ ಕಾಲೇಜುಗಳಲ್ಲಿ ಪರೀಕ್ಷೆ ಬರೆದರೆ, ಆ ಭಾಗದ ವಿದ್ಯಾರ್ಥಿಗಳು ಈ ಭಾಗದ ಕಾಲೇಜುಗಳಲ್ಲಿ ಪರೀಕ್ಷೆ ಬರೆಯಬೇಕು. ಈ ಕಾರಣದಿಂದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳು ಬಸ್‌ನಿಲ್ದಾಣಗಳಲ್ಲಿ ಕಂಡುಬಂದರು.


ಪರೀಕ್ಷಾ ಕೇಂದ್ರಗಳನ್ನು ಬದಲಿಸಿದ್ದರೂ, ಅಲ್ಲಿಗೆ ಹೋಗಬೇಕಾದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿಲ್ಲ. ಈ ಕಾರಣದಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುವಂತಾಗಿದೆ. ತಾಲೂಕಿನ ಹೆಚ್ಚಿನ ಕಾಲೇಜುಗಳು ಪೇಟೆ ಪ್ರದೇಶಗಳಿಂದ ಹೊರಭಾಗದಲ್ಲಿರುವ ಕಾರಣ ಹಲವೆಡೆ ಎಕ್ಸ್ ಪ್ರೆಸ್ ಬಸ್ಸುಗಳು ನಿಲುಗಡೆ ನೀಡುವುದಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಮಾಮೂಲಿ ಸಂಚರಿಸುವ ಲೋಕಲ್ ಬಸ್‌ಗಳೇ ಆಧಾರ .ಇವು ಟ್ರಿಪ್ ಆರಂಭಿಸುವ ಸ್ಥಳದಿಂದಲೇ ತುಂಬಿ ಬರುತ್ತಿದ್ದು ಇವುಗಳನ್ನು ಏರಲು ಜಾಗವಿಲ್ಲದಷ್ಟು ಜನಸಂದಣಿ ಇತ್ತು. ಹೊಸ ಹೊಸ ನಿಯಮಗಳನ್ನು ರೂಪಿಸಿ ವಿದ್ಯಾರ್ಥಿಗಳಿಗೆ ತೊಂದರೆ ನೀಡುತ್ತಿರುವ ಇಲಾಖೆ ನಿಯಮಗಳನ್ನು ರೂಪಿಸುವಾಗ ಅದಕ್ಕೆ ಸರಿಯಾದ ಅಗತ್ಯವ್ಯವಸ್ಥೆಗಳ ಕುರಿತು ಗಮನಹರಿಸುವ ಅಗತ್ಯವಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಆಗ್ರಹಿಸಿದ್ದಾರೆ.

Related posts

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ