September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಮಾ.13 ರಂದು ನಡೆಯಿತು.
ಬೆಳಿಗ್ಗೆ ಪ್ರಾರ್ಥನೆ, ಗಣಪತಿ ಹೋಮ, ಕಲಶಪೂಜೆ, ಊರವರಿಂದ ಹೊರ ಕಾಣಿಕೆ, ಊರವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಉಡುಪಿ ಶ್ರೀರಾಮ ತೀರ್ಥ ಮಠ ಕಾಣಿಯೂರು ಮೂಲ ಮಹಾಸಂಸ್ಥಾನಮ್ ನ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಜಗದ್ಗುರು ಶ್ರೀಮನ್ಮಧ್ವಾಚಾರ್ಯ ರವರಿಗೆ ವ್ಯವಸ್ಥಾಪನ ಸಮಿತಿ ಸದಸ್ಯರು ಅಭಿವೃದ್ಧಿ ಸಮಿತಿ ಸದಸ್ಯರು, ವರಮಹಾಲಕ್ಷ್ಮಿ ಸಮಿತಿಯ ಸದಸ್ಯರಿಂದ ಪೂರ್ಣಕುಂಭ ಸ್ವಾಗತ ಮಾಡಲಾಯಿತು.

ನಂತರ ಸ್ವಾಮೀಜಿಯಿಂದ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಭರತ್ ಶೆಟ್ಟಿ, ಅರ್ಚಕರದ ಅಶೋಕ್ ಭಟ್, ಸಮಿತಿಯ ಸದಸ್ಯರಾದ ಪೂವಪ್ಪ ಬಂಗೇರ, ದುಗ್ಗಪ್ಪಗೌಡ, ದೇಜಪ್ಪ ಪೂಜಾರಿ ಮಹೇಶ್, ಜಯಪ್ರಕಾಶ್, ಪೂವಪ್ಪ ಗೌಡ, ಆನಂದ ಮಡಿವಾಳ ಉಪಸ್ಥಿತರಿದ್ದರು.

ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಗೌಡ ಪೋಸoದೊಡಿ. ಸ್ವಾಗತಿಸಿ, ದೇವದಾಸ್ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ , ಶ್ರೀ ದೇವರುಗಳಿಗೆ ಕಲಶಾಭಿಷೇಕ, ನಾಗದೇವರಿಗೆ ಆಶ್ಲೇಷಾ ಬಲಿ, ತಂಬಿಲ, ದೈವಗಳಿಗೆ ತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ರಾತ್ರಿ ದುರ್ಗಾಪೂಜೆ, ರಂಗಪೂಜೆ, ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ ನಡೆಯಲಿದೆ.


ಮಾರ್ಚ್ ೧೪ರಂದು ಬೆಳಿಗ್ಗೆ ಗಣಪತಿ ಹೋಮ, ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ ಹಾಗೂ ಬಟ್ಟಲು ಕಾಣಿಕೆ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ನೇಮೋತ್ಸವ ಜರುಗಲಿದೆ.

Related posts

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

Suddi Udaya

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ದೇವರ ಪ್ರಸಾದ ನೀಡಿ ಗೌರವಾರ್ಪಣೆ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya
error: Content is protected !!