ಬೆಳ್ತಂಗಡಿ : ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯತ್, ಬೆಳ್ತಂಗಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕೃಷಿ ಇಲಾಖೆ ಇದರ ಜಂಟಿ ಸಹಾಯೋಗದೊಂದಿಗೆ ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿಕ ಫಲಾನುಭವಿಗಳಿಗೆ ಕೃಷಿ ಸಾಧನಾ ಸಲಕರಣೆ ವಿತರಣಾ ಕಾರ್ಯಕ್ರಮ ಮಾ.13 ರಂದು ಲಾಯಿಲ ಸಂಗಮ ಸಭಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾತನಾಡಿ ನಮ್ಮ ತಾಲೂಕಿನಲ್ಲಿರುವಂತಹ ಎಲ್ಲಾ ಅಧಿಕಾರಿಗಳು ಕಳೆದ 4, 5 ತಿಂಗಳಿಂದ ಸತತ ಪರಿಶ್ರಮವನ್ನು ಹಾಕಿ ಇಂದು ಸುಮಾರು ನೂರು 94ಸಿ ಹಕ್ಕುಪಾತ್ರವನ್ನು ತಯಾರು ಮಾಡಿ ಕೊಡುವಂತಹ ಪ್ರಕ್ರಿಯೆಯನ್ನು ಮಾಡಿದ್ದಾರೆ. ಇನ್ನು ಉಳಿದಂತಹದ್ದನ್ನು ಆದಷ್ಟು ಬೇಗ ತಹಸೀಲ್ದಾರ್, ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ವಿಎ ಗಳು ತಕ್ಷಣ ಅದಕ್ಕೆ ಕಾರ್ಯಪ್ರವರ್ತರಾಗಿ ಅದನ್ನು ನಿರ್ವಹಣೆ ಮಾಡುವಂತೆ ಸೂಚಿಸಿದರು. ಹಾಗೂ ಇಡೀ ರಾಜ್ಯ ದಲ್ಲಿ ಅತ್ಯಂತ ಹೆಚ್ಚು ವಿಶೇಷ ಚೇತನರಿಗೆ ತ್ರಿಚಕ್ರ ವಾಹನವನ್ನು ಕೊಟ್ಟಿರುವಂತಹ ಒಂದು ಕ್ಷೇತ್ರವೆಂದರೆ ಅದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಂದರು.
ಬಳಿಕ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರವನ್ನು ಹಾಗೂ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿಕ ಫಲಾನುಭವಿಗಳಿಗೆ ಕೃಷಿ ಸಾಧನಾ ಸಲಕರಣೆಯನ್ನು ವಿತರಿಸಿದರು.
ವೇದಿಕೆಯಲ್ಲಿ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಭಾಜಪ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮರೋಡಿ ಗ್ರಾ.ಪಂ. ಅಧ್ಯಕ್ಷ ರತ್ನಾಕರ್ ಬುನ್ನನ್, ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್, ಉಜಿರೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಕಾರಂತ್ ಹಾಗೂ ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ., ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ, ಮೇಲಂತಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಕಳಿಯ ಗ್ರಾ.ಪಂ. ಅಧ್ಯಕ್ಷ ದಿವಾಕರ ಎಂ., ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರತ್ನಾವತಿ, ಅಳದಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಶಾಲಿನಿ ಉಪಸ್ಥಿತರಿದ್ದರು.
ಈಸಂದರ್ಭದಲ್ಲಿ ಗ್ರಾ.ಪಂ ಸದಸ್ಯರುಗಳು, ತಾಲೂಕು ಪಂ. ಮುಖ್ಯ ಕಾರ್ಯನಿರ್ವಾಹಕರು, ಕಾರ್ಮಿಕ ಇಲಾಖಾ ಉಪ ನಿರ್ದೇಶಕರು ಹಾಗೂ ಕೃಷಿ ಇಲಾಖಾ ಉಪ ನಿರ್ದೇಶಕರು ಉಪಸ್ಥಿತರಿದ್ದರು.