April 2, 2025
Uncategorized

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

ಬೆಳ್ತಂಗಡಿ: ಬೈಕ್ ಸವಾರರೊಬ್ಬರಿಗೆ ಕಾಡಾನೆ ಎದುರಾಗಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಮಾ.13 ರಂದು ನಡೆದಿದೆ.
ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬೊಳ್ಳೂರು ಬೈಲು ಎಂಬಲ್ಲಿ ಇಲ್ಲಿನ ಕೃಷಿಕ ಜಾರ್ಜ್ ಕೆ.ಜೆ‌. ಎಂಬವರು ತನ್ನ ಮಕ್ಕಳನ್ನು ರಾತ್ರಿ 8 ಗಂಟೆ ಸುಮಾರಿಗೆ ಬೆದ್ರಬೆಟ್ಟು ಕಡೆಯಿಂದ ಟ್ಯೂಷನ್ ಮುಗಿಸಿ ಬೈಕ್ ನಲ್ಲಿ ಕರೆದುಕೊಂಡು ಬರುವ ವೇಳೆ ರಸ್ತೆ ಮಧ್ಯದಲ್ಲಿ ಕಾಡಾನೆ ಎದುರಾಗಿದೆ.


ರಸ್ತೆಯ ತಿರುವಿನಲ್ಲಿ ಬೈಕ್ ಸವಾರನಿಗೆ ಸುಮಾರು 5 ಅಡಿ ಅಂತರದಲ್ಲಿ ಕಾಡಾನೆ ಕಂಡುಬಂದಿದ್ದು ಜತೆಯಲ್ಲಿ ಮಕ್ಕಳು ಇದ್ದ ಕಾರಣ ಸವಾರ ಸಂಪೂರ್ಣ ಕಂಗಲಾಗಿದ್ದಾರೆ. ರಸ್ತೆಯಲ್ಲಿ ತಿರುಗಾಡುತ್ತಿದ್ದ ಕಾಡಾನೆ ಕೊಂಚ ಸಮಯದ ಬಳಿಕ ಗುಡ್ಡದತ್ತ ತೆರಳಿತು.
ಇಲ್ಲಿಂದ ಮುಂದುವರಿದ ಕಾಡಾನೆ ಲಿಜೋ ಸ್ಕರಿಯ ಎಂಬವರ ತೋಟಕ್ಕೆ ನುಗ್ಗಿ ತೆಂಗಿನ ಮರ ಹಾಗೂ ಬಾಳೆ ಗಿಡಗಳನ್ನು ನಾಶ ಮಾಡಿದ್ದು, ಇಂದಬೆಟ್ಟಿನತ್ತ ತೆರಳಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ.
-ಬೀದಿ ದೀಪ ಇಲ್ಲ-
ಮುಂಡಾಜೆ-ದಿಡುಪೆ ರಸ್ತೆಯು ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿದ್ದು ಇಲ್ಲಿ ಅಗತ್ಯ ಸ್ಥಳಗಳಲ್ಲಿ ಬೀದಿ ದೀಪಗಳು ಉರಿಯುತ್ತಿಲ್ಲ.ಇಲ್ಲಿನ ಗ್ರಾಮಗಳಲ್ಲಿ ಕಾಡಾನೆ ಸಹಿತ ಹಲವು ವನ್ಯ ಮೃಗಗಳು ರಸ್ತೆಯುದ್ದಕ್ಕೂ ಸಂಚರಿಸುವುದು ಆಗಾಗ ನಡೆಯುತ್ತದೆ. ಬೀದಿ ದೀಪಗಳು ಉರಿಯುತ್ತಿದ್ದರೆ ಇವುಗಳ ಇರುವಿಕೆ ಕೊಂಚ ದೂರದಿಂದಲೇ ಕಂಡುಬರುತ್ತದೆ. ಆದರೆ ಇಲ್ಲಿ ಕೆಲವೆಡೆ ಬೀದಿ ದೀಪಗಳು ಇದ್ದರೂ ಅವು ಉರಿಯುತ್ತಿಲ್ಲ ಅವುಗಳನ್ನು ತಕ್ಷಣ ದುರಸ್ತಿಪಡಿಸಬೇಕು ಹಾಗೂ ಅಗತ್ಯ ಸ್ಥಳಗಳನ್ನು ಗುರುತಿಸಿ ಬೀದಿ ದೀಪಗಳನ್ನು ಅಳವಡಿಸುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.

Related posts

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya
error: Content is protected !!