ಧರ್ಮಸ್ಥಳ : ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಇಂಗ್ಲೆಡ್ ದೇಶದ ಪ್ರತಿಷ್ಠಿತ NQA ಸಂಸ್ಥೆಯಿಂದ ಅಂತರಾಷ್ಟ್ರೀಯ ISO 27001 ಮಾನ್ಯತೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಾ.15ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಭಾಭವನದಲ್ಲಿ ನಡೆಯಿತು.
ಅಂತಾರಾಷ್ಟ್ರೀಯ ಐಎಸ್ ಒ 27001 ಮ್ಯಾನತೆಯನ್ನು NQA ಸಂಸ್ಥೆ ಬೆಂಗಳೂರಿನ ಪ್ರಧಾನ ವ್ಯವಸ್ಥಾಪಕ, ನಿರ್ದೇಶಕ ಅಮರ್ ದೀಪ್ ಸಿ.ಕೆ. ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಹಸ್ತಾಂತರಿಸಿ ಮಾತನಾಡಿ ಎಸ್.ಕೆ.ಡಿ.ಆರ್.ಡಿ.ಪಿ ಭಾರತ ಹೆಮ್ಮೆ ಪಟ್ಟಂತಹ ಸಂಸ್ಥೆ ಎಂದು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಹೇಮಾವತಿ ವಿ ಹೆಗ್ಗಡೆ, ಮಾನಸ ಕನ್ಸಿಸ್ಟೆನ್ಸಿಯ ಮುಖ್ಯಸ್ಥ ಭಾರ್ಗವ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್ .ಹೆಚ್. ಮಂಜುನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಎಸ್ . ಎಸ್. ಹಾಗೂ ಶಾಂತಾರಾಮ್ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿದೇರ್ಶಕರುಗಳಾದ ರಾಜೇಶ್ ಶೆಟ್ಟಿ ಮತ್ತು ಸುರೇಶ್ ಕಾರ್ಯಕ್ರಮ ನಿರೂಪಿಸಿದರು.