September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ಧರ್ಮಸ್ಥಳ ಹಾಗೂ ಸೆಲ್ಕೋ ಫೌಂಡೇಷನ್, ಬೆಂಗಳೂರು‌ ಇವರ ಜಂಟಿ ಆಶ್ರಯದಲ್ಲಿ ಮಹಿಳಾ ಉದ್ಯಮಿಗಳಿಗಾಗಿ “ಸಮೃದ್ಧಿ-ಸಂತೃಪ್ತಿ ಸಬಲೀಕರಣ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಮಾ.16 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಬೆಳಗ್ಗೆ 9:00 ಗಂಟೆಗೆ ಆರಂಭವಾಗಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ವಹಿಸಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್.‌ಕೆ.ಡಿ.ಆ‌ರ್.ಡಿ.ಪಿ.)ಯ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಡಾ. ಹೇಮಾವತಿ ವಿ. ಹೆಗ್ಗಡೆ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೆಲ್ಕೋದ ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಹರೀಶ್‌ ಹಂದೆ, ಸ್ವಾಮಿ ವಿವೇಕಾನಂದ ಯೂತ್‌ ಮೂವ್ಮೆಂಟ್‌ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಸವಿತಾ ಸುಳುಗೋಡು‌, ಎಸ್.‌ಕೆ.ಡಿ.ಆ‌ರ್.ಡಿ.ಪಿ.ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಎಚ್.ಎಲ್‌. ಮಂಜುನಾಥ್‌, ಸೆಲ್ಕೋ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಮೋಹನ್‌ ಭಾಸ್ಕರ್‌ ಹೆಗಡೆ, ಎಸ್.‌ಕೆ.ಡಿ.ಆ‌ರ್.ಡಿ.ಪಿ.ಯ ಮುಖ್ಯ ನಿರ್ವಹಣಾಧಿಕಾರಿಗಳಾದ ಶ್ರೀ ಅನಿಲ್‌ ಕುಮಾರ್‌ ಎಸ್.ಎಲ್.‌, ಭಾಗವಹಿಸುವರು.

ಕಾರ್ಯಕ್ರಮದಲ್ಲಿ, ಗ್ರಾಮೀಣ ಪ್ರದೇಶಗಳ ದೃಷ್ಟಿಯಲ್ಲಿ ಉದ್ಯಮಶೀಲತೆ – ಅವಕಾಶಗಳು ಮತ್ತು ಸವಾಲುಗಳು
ಹಾಗೂ ಸುಸ್ಥಿರ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಉದ್ಯಮವನ್ನು ನಡೆಸುತ್ತಿರುವ ಮಹಿಳಾ ಸಾಧಕರಿಂದ ಅನುಭವಗಳ ಪ್ರಸ್ತುತಿ ಎಂಬ ವಿಷಯಗಳ ಕುರಿತು ಎರಡು ವಿಚಾರಗೋಷ್ಠಿಗಳು ನಡೆಯಲಿವೆ.

Related posts

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya
error: Content is protected !!