23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಇವರ ಜಂಟಿ ಆಶ್ರಯಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ ಮಾ.16ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ವಹಿಸಿ, ಮಾತನಾಡಿ ಪಯಾ೯ಯ ಇಂಧನಕ್ಕಾಗಿ ಸೂರ್ಯ ನ ಬೆಳಕನ್ನು ಬಳಸುವ ಬಗ್ಗೆ ಸಂಶೋಧನೆ ನಡೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಇದರ ಬಳಕೆಯಾಗಬೇಕು ಎಂದು ಕೆರೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಡಾ. ಹೇಮಾವತಿ ವಿ. ಹೆಗ್ಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸೆಲ್ಕೋ ಫೌಂಡೇಶನ್ ಸಂಸ್ಥಾಪಕ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಹರೀಶ್ ಹಂದೆ, ಸ್ವಾಮಿ ವಿವೇಕಾನಂದ ಯೂತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸವಿತಾ ಸುಳುಗೋಡು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎಲ್.ಹೆಚ್. ಮಂಜುನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಭಾಗವಹಿಸಿದ್ದರು.

ಸುಮಂಗಳಾ , ಕವಿತಾ ಪ್ರಾರ್ಥಿಸಿದರು. ಬೆಂಗಳೂರು ಸೆಲ್ಕೋ ಸೋಲಾರ್ ಲೈಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೋಹನ್ ಭಾಸ್ಕರ ಹೆಗಡೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಯೋಜನೆಯ ಯೋಜನಾಧಿಕಾರಿ ಶ್ರೀನಿವಾಸ ಪೂಜಾರಿ ಅತ್ತಾಜೆ, ಸೆಲ್ಕೋ ಸಂಸ್ಥೆಯ ಡಿ ಜಿ ಎಂ ಗುರು ಪ್ರಕಾಶ್, ಪ್ರಸನ್ನ ಹೆಗ್ಡೆ ನಿರೂಪಿಸಿದರು.

ವಿವಿಧ ಮಹಿಳಾ ಉದ್ಯಮಿಗಳು, ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸೆಲ್ಕೋ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.

Related posts

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya
error: Content is protected !!