March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

ಬೆಳ್ತಂಗಡಿ : ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೆ. ಜಯಕೀರ್ತಿ ಜೈನ್ ರವರು ಸರಕಾರಿ ಸೇವೆಯಿಂದ ನಿವೃತ್ತಿಯಾಗಿದ್ದು ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಎಸ್. ಹೂಗಾರ್ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ, ನಿವೃತ್ತ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿ.ಆರ್. ನರೇಂದ್ರ ಕುಮಾರ್ ಮಂಗಳೂರು, ಉದ್ಯಮಿ ನಾಣ್ಯಪ್ಪ ಪೂಜಾರಿ, ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ|
ಚಂದ್ರಕಾಂತ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ, ಕಾನೂನು ಸಲಹೆಗಾರರಾದ ನ್ಯಾಯವಾದಿ ಶಶಿಕಿರಣ್ ಜೈನ್, ಪಶು ಸಂಗೋಪನಾ ಇಲಾಖೆಯ ಮುಖ್ಯ ಆಡಳಿತ ಪಶು ವೈದ್ಯಾಧಿಕಾರಿ ಡಾ|ರವಿ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಜಯಕೀರ್ತಿ ಜೈನ್ ರವರು ನಮ್ಮ ಸಹಕಾರಿ ಸಂಘವು ಪ್ರಾರಂಭವಾಗಿ 15 ವರ್ಷಗಳಾಗಿದ್ದು ಇದೀಗ ಸಹಕಾರಿ ಸಂಘವನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ಯುವುದಾಗಿ ಹಾಗೂ ಎಲ್ಲರ ಸಹಕಾರದಿಂದ ಇಂದು ಉತ್ತಮ ಸಹಕಾರಿ ಸಂಘವಾಗಿ ಬೆಳೆದು ಬಂದಿದೆ ಎಂದು ತಿಳಿಸಿದರು. ನಿತ್ಯ ನಿಧಿ ಠೇವಣಿ ಸಂಗ್ರಾಹಕರು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನೆ ನಡೆಯಿತು.

ಸಭೆಯಲ್ಲಿ ನಿರ್ದೇಶಕರಾದ ಜಯರಾಜ್ ಜೈನ್, ಅಬ್ದುಲ್ ರಝಾಕ್, ಶ್ರೀಮತಿ ಆರತಿ, ಶ್ರೀಮತಿ ವಾರಿಜ ಕೆ., ಪ್ರಶಾಂತ್ ಕುಮಾರ್, ಪರಮೇಶ್ ಟಿ., ಶ್ರೀಮತಿ ರತ್ನಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶಾಖಾ ಪ್ರಬಂಧಕ ಅತಿಶಯ್ ಜೈನ್, ಶ್ರೀಮತಿ ವಿಶಾಲ, ಕಾನೂನು ಸಲಹೆಗಾರರಾದ ನ್ಯಾಯವಾದಿ ಶಿವಯ್ಯ, ಸಾಲ ವಸೂಲಾತಿಗಾರರಾದ ನಿರ್ಮಲ್ ಕುಮಾರ್ ಜೈನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಉಸ್ತುವಾರಿಯನ್ನು ಸಲಹೆಗಾರರಾದ ವಸಂತ ಸುವರ್ಣ ವಹಿಸಿದ್ದರು. ಸಹಕಾರಿ ಸಂಘದ ನಿರ್ದೇಶಕ ಚಂದ್ರಶೇಖರ ಸ್ವಾಗತಿಸಿ, ನಿರ್ದೇಶಕರಾದ ಶ್ರೀಮತಿ ಹೇಮಲತಾ ವಂದಿಸಿದರು. ಶಿಕ್ಷಣ ಇಲಾಖೆಯ ಸಿ.ಆರ್.ಪಿ. ರಾಜೇಶ್ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!