25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಉಜಿರೆ : ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಹೊಡೆದ ಘಟನೆ ಮಾ.14 ರಂದು ನಡೆದಿದೆ.

ಉಜಿರೆ ನಿವಾಸಿ ರಾಮಣ್ಣ ನಾಯ್ಕ (57) ಎಂಬವರ ದೂರಿನಂತೆ, ಮಾ.14ರಂದು ಸಂಜೆ, ಉಜಿರೆ ಗ್ರಾಮದ ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ, ರಾಮಣ್ಣ ರವರು ತನ್ನ ಬಾಬ್ತು ದ್ಗಿಚಕ್ರ ವಾಹನ ನಂಬ್ರ ಕೆಎ70 ಹೆಚ್‌7484 ನೇದನ್ನು ಸವಾರಿ ಮಾಡಿಕೊಂಡು ಹೋಗುತ್ತಿದ್ದಾಗ, ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ಕೆಎ70ಜೆ2415ನೇದನ್ನು ಅದರ ಸವಾರ ಆರೋಪಿ ದೀರಜ್‌ ರವರು ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ರಾಮಣ್ಣ ರವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಎರಡೂ ವಾಹನಗಳ ಸವಾರರು ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಅವರುಗಳನ್ನು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 30/2024 ಕಲಂ: 279,337 ಭಾ.ದಂ.ಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!