23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

ಬೆಳ್ತಂಗಡಿ:ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಮೋಹನ್ ಕುಮಾರ್ ಅವರು ಈ ಸಾಲಿನ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇಂದು ಮಾರ್ಚ್ 17ರ ಭಾನುವಾರ ಸಂಜೆ 4.30 ಕ್ಕೆ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕೊಳಂಬೆ ಪ್ರದೇಶಕ್ಕೆ ನೆರೆ ಅಪ್ಪಳಿಸಿ ಆ ಭಾಗದ ಜನರ ಆಸ್ತಿ ಪಾಸ್ತಿಗಳು ನಷ್ಟಗೊಂಡಾಗ ಅವರ ನೆರವಿಗೆ ನಿಂತವರು ಮೋಹನ್ ಕುಮಾರ್ ರವರು. ಆ ಸಂದರ್ಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡವನ್ನು ಕಟ್ಟಿಕೊಂಡು ಸಂತ್ರಸ್ತರಿಗೆ ನೆರವು ಒದಗಿಸಿ ಬದುಕು ಕಟ್ಟಿ ಕೊಟ್ಟವರು ಮೋಹನ್ ಕುಮಾರ್ ರವರು.ಕಳೆದ ಹಲವಾರು ಸಮಯಗಳಿಂದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಗಾಗಲೇ 5 ಶಾಲೆಗಳನ್ನು ದತ್ತು ಸ್ವೀಕಾರ ಮಾಡಿ ಶಾಲೆಯ ಅಭಿವೃದ್ಧಿಗೆ ಸಹಕರಿಸುತ್ತಿರುವ ಮೋಹನ್ ಕುಮಾರ್ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

Related posts

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya
error: Content is protected !!