24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

ಬೆಳ್ತಂಗಡಿ:ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಮೋಹನ್ ಕುಮಾರ್ ಅವರು ಈ ಸಾಲಿನ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇಂದು ಮಾರ್ಚ್ 17ರ ಭಾನುವಾರ ಸಂಜೆ 4.30 ಕ್ಕೆ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕೊಳಂಬೆ ಪ್ರದೇಶಕ್ಕೆ ನೆರೆ ಅಪ್ಪಳಿಸಿ ಆ ಭಾಗದ ಜನರ ಆಸ್ತಿ ಪಾಸ್ತಿಗಳು ನಷ್ಟಗೊಂಡಾಗ ಅವರ ನೆರವಿಗೆ ನಿಂತವರು ಮೋಹನ್ ಕುಮಾರ್ ರವರು. ಆ ಸಂದರ್ಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡವನ್ನು ಕಟ್ಟಿಕೊಂಡು ಸಂತ್ರಸ್ತರಿಗೆ ನೆರವು ಒದಗಿಸಿ ಬದುಕು ಕಟ್ಟಿ ಕೊಟ್ಟವರು ಮೋಹನ್ ಕುಮಾರ್ ರವರು.ಕಳೆದ ಹಲವಾರು ಸಮಯಗಳಿಂದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಗಾಗಲೇ 5 ಶಾಲೆಗಳನ್ನು ದತ್ತು ಸ್ವೀಕಾರ ಮಾಡಿ ಶಾಲೆಯ ಅಭಿವೃದ್ಧಿಗೆ ಸಹಕರಿಸುತ್ತಿರುವ ಮೋಹನ್ ಕುಮಾರ್ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

Related posts

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!