23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಏಕತಾ ಸೌಧದಲ್ಲಿ ಸಂಘದ ಅಧ್ಯಕ್ಷ ಜಯರಾಜ್ ಜೈನ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಹಿರಿಯ ಅಧಿಕಾರಿಗಳು, ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ, ತಾಲೂಕು ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಆಡಳಿತ ಮುಖ್ಯ ಪಶು ವೈದ್ಯಾಧಿಕಾರಿ ಡಾ| ರವಿ ಕುಮಾರ್, ಕೃಷಿ ಅಧಿಕಾರಿ ಹಾಗೂ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಎಸ್. ಹೂಗಾರ್, ಸಂಘದ ಕಾರ್ಯದರ್ಶಿ ಶ್ರೀಮತಿ ಗಂಗಾರಾಣಿ ನಾ. ಜೋಶಿ, ಕೋಶಾಧಿಕಾರಿ ಶ್ರೀಮತಿ ಮೇರಿ ಎನ್. ಜೆ., ಹಿರಿಯ ಉಪಾಧ್ಯಕ್ಷ ಆನಂದ ಡಿ., ಸಂಚಾಲಕ ಧರಣೇಂದ್ರ ಜೈನ್, ಉಪಾಧ್ಯಕ್ಷ ಸಿದ್ದೇಶ್ ಎ.,ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸಹಕಾರಿ ಸಂಘದ ನಿರ್ದೇಶಕರು, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ಹಾಗೂ ಹಲವಾರು ವೃಂದ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಗೌರವಿಸಿದರು.

ಕಾರ್ಯಕ್ರಮವನ್ನು ಅಜಿತ್ ಕೊಕ್ರಾಡಿ ನಿರೂಪಿಸಿದರು.

Related posts

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!