ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಅವರಿಗೆ ಈ ವರ್ಷದ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಕ್ಕೆ ಭಾಜನರಾಗಿದ್ದಾರೆ.

ಮಾರ್ಚ್ 17ರ(ಇಂದು) ಭಾನುವಾರ ರಾತ್ರಿ 9 ಗಂಟೆಗೆ ಕ್ಕೆ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋಹನ್ ಕುಮಾರ್ ಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕಳೆದ ಹಲವಾರು ಸಮಯಗಳಿಂದ ಸಮಾಜ ಸೇವೆ ಹಾಗೂ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಗಾಗಲೇ 5 ಶಾಲೆಗಳನ್ನು ದತ್ತು ಸ್ವೀಕಾರ ಮಾಡಿ ಶಾಲೆಯ ಅಭಿವೃದ್ಧಿಗೆ ಸಹಕರಿಸುತ್ತಿರುವ ಮೋಹನ್ ಕುಮಾರ್ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಧಾನ‌ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ್ ,ಉಜಿರೆ ಸಂಧ್ಯಾ ಟ್ರೆಡರ್ಸ್ ಮಾಲೀಕ ರಾಜೇಶ್ ಪೈ , ಕನ್ನಡ ಚಲನಚಿತ್ರ ನಟ ರಮೇಶ್ ಅರವಿಂದ್,ಉದ್ಯಮಿ ರವಿ ಚಕ್ಕಿತ್ತಾಯ ಭಾಗಿಯಾಗಿದ್ದರು.

Related posts

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya
error: Content is protected !!