April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಮಾ.19ರವರೆಗೆ ನಡೆಯಿತು.

ಮಾ.17 ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವವು ವಿಜೃಂಭಣೆಯಿಂದ ನಡೆಯಿತು.

ಮಾ.18 ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ ಪಡ್ಡ್ಯೋಡಿ ಗುತ್ತಿಗೆ ಭಂಡಾರ ಹಿಂದಿರುಗುವುದು., ಮಾ.19 ರಂದು ರಾತ್ರಿ ಗಂಟೆ 7.30 ರಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ

ಈ ಸಂದರ್ಭದಲ್ಲಿ ಪಡ್ಡ್ಯಾರಬೆಟ್ಟ ಅನುವಂಶೀಯ ಆಡಳಿತದಾರರು ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಡ್ಯೋಡಿಗುತ್ತು, ವಿಕಾಸ್ ಜೈನ್, ವಿಶ್ವಾಸ್ ಜೈನ್, ಮತ್ತು ಮನೆಯವರು, ಊರ ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya
error: Content is protected !!