November 27, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

ಮಡಂತ್ಯಾರು : ದೇಶದ ಸಾರ್ವಜನಿಕ ಕ್ಷೇತ್ರದ 5ನೇ ಅತಿ ದೊಡ್ಡ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮಡಂತ್ಯಾರು ಶಾಖೆಯ ನವೀಕೃತ ಶಾಖೆಯ ಉದ್ಘಾಟನಾ ಸಮಾರಂಭ ಮಾ.16 ರಂದು ನಡೆಯಿತು.

ವಲಯ ಮುಖ್ಯಸ್ಥರಾದ ರೇಣು ನಾಯರ್ ನವೀಕೃತ ಶಾಖೆಯನ್ನು ಉದ್ಘಾಟಿಸಿ ಮಾತನಾಡುತ್ತಾ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಮಡಂತ್ಯಾರ್ ಗೆ ಅಭಿವೃದ್ಧಿಗೆ ಪೂರಕವಾಗಿ ಸಕಲ ಸವಲತ್ತು ಇರುವ ನವೀಕೃತ ಶಾಖೆಯನ್ನು ನೀಡುವ ಗುರಿಯನ್ನು ಇಂದು ತಲುಪಿದ್ದೇವೆ, ಬ್ಯಾಂಕ್ ಗಳು ವಿಲೀನಗೊಂಡ ನಂತರ ಹೆಚ್ಚಿನ ಸವಲತ್ತುಗಳನ್ನು ಒದಗಿಸುತ್ತಿದೆ ಹಾಗೂ ಇದರ ಲಾಭ ಜನಸಾಮಾನ್ಯರಿಗೆ ದೊರಕುತ್ತಿದೆ. ಪ್ರಾದೇಶಿಕ ಕಚೇರಿಯ ಮುಖ್ಯಸ್ಥರಾದ ಮಹೇಶ ಜೆ ನೆರಿದಿದ್ದ ಗಣ್ಯರನ್ನು ಮತ್ತು ಗ್ರಾಹಕರನ್ನು ಸ್ವಾಗತಿಸಿ ಮಡಂತ್ಯಾರಿನ ಜನತೆಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಈ ಶಾಖೆಯು ಸ್ಥಳೀಯರ ಬ್ಯಾಂಕಿಂಗ್ ಅಗತ್ಯಗಳನ್ನು ಪೂರೈಸುವಲ್ಲಿ ಬಹು ಮಹತ್ವದ ಪಾತ್ರವಹಿಸಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಪಂಚಾಯತ್ ಅಧ್ಯಕ್ಷೆ ರೂಪಾ ನವೀನ್ ಮಾತನಾಡುತ್ತ ಗ್ರಾಮ ಪಂಚಾಯತ್ ಗೆ ಈ ಬ್ಯಾಂಕಿನಿಂದ ಹಲವಾರು ಪ್ರಯೋಜನ ಪಡೆದಿದೆ ಹಾಗೂ ನಮ್ಮ ಎಲ್ಲಾ ಕೆಲಸ ಕಾರ್ಯಗಳು ಸಾಂಗವಾಗಿ ನಡೆಯುವಲ್ಲಿ ಶಾಖೆಯ ಸಿಬಂದಿಗಳು ಸಹಕರಿಸುತ್ತಿದ್ದಾರೆ ಎಂದರು.

ಇನ್ನೊರ್ವ ಮುಖ್ಯ ಅತಿಥಿಗಳಾದ ವಿಠಲ ಶೆಟ್ಟಿ ಮಾತನಾಡಿ ಬ್ಯಾಂಕಿನ ಹಲವಾರು ಯೋಜನೆಗಳು ಜನರಿಗೆ ತಲುಪುವುದರಿಂದ ಜನರಿಗೆ ತುಂಬಾ ಪ್ರಯೋಜನವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಯಂತ್ ಶೆಟ್ಟಿ ಹಾಗೂ ಅಶೋಕ್ ಗುಂಡ್ಯಲಿಕೆ ಮಾತನಾಡುತ್ತಾ ಶಾಖೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದರು.

ಗ್ರಾಹಕರಿಗೆ ಇನ್ನೂ ಉತ್ತಮ ಸೇವೆಗಳನ್ನು ನೀಡುವ ನಿಟ್ಟಿನಲ್ಲಿ ಶಾಖೆಯನ್ನು ನವೀಕರಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವು ತನ್ನ ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸುವುದಕ್ಕೆ ಹೆಸರುವಾಸಿಯಾಗಿದೆ ಹಾಗೂ ತನ್ನ ಗ್ರಾಹಕರಿಗಾಗಿ ವಿವಿಧ ಡಿಜಿಟಲ್ ಉತ್ಪನ್ನಗಳು, ಠೇವಣಿದಾರರಿಗೆ, ಹಿರಿಯ ನಾಗರಿಕರಿಗೆ ಅತ್ಯಾಕರ್ಷಕ ಬಡ್ಡಿ ದರ ಹಾಗೂ ಸ್ಪರ್ಧಾತ್ಮಕ ಬಡ್ಡಿ ದರದಲ್ಲಿ ವಿವಿಧ ಸಾಲಗಳನ್ನು ನೀಡುತ್ತಿದೆ. ಜನತೆಗೆ ಹಣಕಾಸಿನ ಸಾಕ್ಷರತೆ ಮತ್ತು ಬ್ಯಾಂಕಿಂಗ್ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯವು ಸದಾ ಬದ್ಧವಾಗಿರುತ್ತದೆ.

ಕಾರ್ಯಕ್ರಮದ ಶಾಖಾ ಪ್ರಬಂಧಕ ಅಶೋಕ್ ಕೋಟ್ಯಾನ್ ನಿರೂಪಿಸಿದರು.

Related posts

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya
error: Content is protected !!