39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಪತ್ರಕರ್ತ, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅವರ ಅಧ್ಯಕ್ಷತೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ನುಡಿ ನಮನ ಕಾರ್ಯಕ್ರಮವು ಸಂಘದ ಕಚೇರಿಯಲ್ಲಿ ಮಾ.19 ಮಂಗಳವಾರ ನಡೆಯಿತು.


ಸಂಘದ ಮಾಜಿ ಅಧ್ಯಕ್ಷ , ಹಿರಿಯ ಸದಸ್ಯ ಆರ್.ಎನ್.ಪೂವಣಿ ನಾ ’ವುಜಿರೆ’ಯವರ ಒಡನಾಟದ ದಿನಗಳನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.


ಮಾಜಿ ಅಧ್ಯಕ್ಷರಾದ ಶ್ರೀನಿವಾಸ ತಂತ್ರಿ, ಪುಷ್ಪರಾಜ ಶೆಟ್ಟಿ, ಶಿಬಿ ಧರ್ಮಸ್ಥಳ, ಬಿ.ಎಸ್. ಕುಲಾಲ್ ನುಡಿನಮನ ಸಲ್ಲಿಸಿ ಒಡನಾಟದ ದಿನಗಳನ್ನು ಮೆಲುಕು ಹಾಕಿದರು. ಸಂಘದ ಪದಾಧಿಕಾರಿಗಳು, ಸದಸ್ಯರು ಪುಷ್ಪಾರ್ಚನೆಗೈದರು. ಈ ಸಂದರ್ಭ ಸಂಘದ ವತಿಯಿಂದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ಮನೋಹರ್ ಬಳೆಂಜ, ಅಚುಶ್ರೀ ಬಾಂಗೇರು, ಹೃಷಿಕೇಶ್ ಧರ್ಮಸ್ಥಳ, ಮಾಜಿ ಕೋಶಾಧಿಕಾರಿ ತುಕರಾಮ್, ಜಾರಪ್ಪ ಪೂಜಾರಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ್ ಶಿರ್ಲಾಲು ನಿರೂಪಿಸಿ ವಂದಿಸಿದರು.

Related posts

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya
error: Content is protected !!