September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿದೇಶಕ್ಕೆ ಹೋಗುವ ಕನಸು ಹೊತ್ತಿದ್ದ ವ್ಯಕ್ತಿಯೋರ್ವರಿಗೆ ಪರಿಚಿತನೋರ್ವ ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪ್ರಕರಣವೊಂದು ಹತ್ಯಡ್ಕ ಗ್ರಾಮದಿಂದ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನಿವಾಸಿ ಅಲ್ಬಿನ್ ಕೆ.ಆರ್ ಎಂಬವರೇ ಪರಿಚಿತ ಮನೋಜ್ ಎಂಬಾತನಿಂದ ವೀಸಾ ವಂಚನೆಗೊಳಗಾದ ವ್ಯಕ್ತಿಯಾಗಿದ್ದಾರೆ.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನಿವಾಸಿ ರೆಜಿ ಕೆ.ಎ.(47) ಎಂಬವರ ಪುತ್ರ ಅಲ್ಬಿನ್ ಕೆ.ಆರ್ ಎಂಬವರಿಗೆ ಪೋಲ್ಯಾಂಡ್‌ ದೇಶದಲ್ಲಿ ಉದ್ಯೋಗಕ್ಕೆ ಹೋಗಲು ಆಪಾದಿತ ಮನೋಜ್ ಎಂಬಾತನು ವೀಸಾ ಕೊಡಿಸುವುದಾಗಿ ನಂಬಿಸಿ ವಂಚಿಸಿರುವುದಾಗಿದೆ.

ಮನೋಜ್ ಎಂಬಾತನು 2023ರ ಮೇ 22 ರಿಂದ 2024ರ ಮಾ19ರ ಅವಧಿಯಲ್ಲಿ ವಿವಿಧ ಕಾರಣಗಳನ್ನು ನೀಡಿ ಮನೋಜ್ ಅವರಿಂದ ಹಂತ ಹಂತವಾಗಿ ಒಟ್ಟು 2,50,000 ರೂಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದನು. ಆದರೆ ಈತ ಇದುವರೆಗೆ ಕೊಟ್ಟ ಮಾತಿನಂತೆ ಅಲ್ಬಿನ್ ಕೆ.ಆರ್ ಅವರಿಗೆ ವೀಸಾವನ್ನು ಕೊಡಿಸದೇ ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿರುವ ಘಟನೆ ನಡೆದಿದೆ.

ಇದೀಗ ವಂಚನೆಗೊಳಗಾದ ಅಲ್ಬಿನ್ ಕೆ.ಆರ್ ಎಂಬವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya
error: Content is protected !!