25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

ಬೆಳ್ತಂಗಡಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಮಾ.20ರಂದು ಸಂಜೆ ನಡೆದಿದೆ.

ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ಶ್ರೀಶೈಲ ಡಿ ಮುರಗೋಡ ನೇತೃತ್ವದ ಪೊಲೀಸರು ತಂಡ ದಾಳಿ ನಡೆಸಿ, ದಾಳಿ ವೇಳೆ ಆರೋಪಿಯ ವಶದಲ್ಲಿದ್ದ 90 ಎಂ.ಎಲ್. ಮದ್ಯ ತುಂಬಿದ 32 ಸ್ಯಾಚೆಟ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮದ್ಯದ ಒಟ್ಟು ಪ್ರಮಾಣ 2.880 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ1,312/- ರೂಪಾಯಿ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Related posts

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!