23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾ.21ರಿಂದ ಪ್ರಾರಂಭಗೊಂಡು ಮಾ.24 ರವರೆಗೆ ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಕೃಷ್ಣಪ್ರಸಾದ ಉಡುಪರ ನೇತೃತ್ವದಲ್ಲಿ ನಡೆಯಲಿದೆ.

ಮಾ. 21ರಂದು ಸಂಜೆ ತಂತ್ರಿಗಳ ಹಾಗೂ ಋತ್ವಿಜರ ಆಗಮನ, ದೇವತಾ ಪ್ರಾರ್ಥನೆ , ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಾಕ್ಷೆಘ್ನ ಹೋಮ, ರಾತ್ರಿ ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ, ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ಶ್ರೀನಿವಾಸ್ ಮುಡೆತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಬ್ರಹ್ಮಣ್ಯ ನೆಲ್ಲಿತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಮಂಡೆಕರ, ಉಪಾಧ್ಯಕ್ಷ ಹರೀಶ್ ಗೌಡ ಹೊಳೆಗಂಡಿ, ಪ್ರಧಾನ ಕಾರ್ಯದರ್ಶಿ ಧರ್ಮಪಾಲಗೌಡ, ಕಾರ್ಯದರ್ಶಿ ಪುನೀತ್ ಗೌಡ, ಕೋಶಾಧಿಕಾರಿ ಮಾಧವ ಪೂಜಾರಿ ದೇನೋಡಿ, ಸದಸ್ಯ ಕುಶಾಲಪ್ಪ ಗೌಡ ಜಿ. ಬದ್ರಿಜಾಲು ಹಾಗೂ ಆಡಳಿತ ಸಮಿತಿಯ ಸದಸ್ಯರು, ಸಲಹೆಗಾರರು, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!