April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

ಉಜಿರೆ: ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡವೊಂದು ತನ್ನನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಒಡ್ಡಿರುವುದಾಗಿ ಉಜಿರೆ ಗ್ರಾಮದ ನಿವಾಸಿ ಹರೀಶ್‌ ಆಚಾರ್ಯ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಾ. 21 ರಂದು ರಾತ್ರಿ ಉಜಿರೆ ಗ್ರಾಮದ ರಥಬೀದಿಯಲ್ಲಿರುವ ಸಮಯ, ಉಜಿರೆ ಗ್ರಾಮದ ಮನೋಜ, ಕಲ್ಮಂಜದ ಪ್ರಜ್ವಲ್‌ ಗೌಡ ಕೆ .ವಿ, ಹಾಗೂ ಉಜಿರೆಯ ಜಯಂತ ಎಂಬವರುಗಳು ಕಾರು ಹಾಗೂ ಒಮಿನಿ ಗಾಡಿಯಲ್ಲಿ ಬಂದು ತನ್ನ ನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿರುತ್ತಾರೆ ಆರೋಪಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ, ಅಕ್ರ ನಂ 38/2024 ಕಲಂ: 143,147,341,504,506, r/w 149 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya
error: Content is protected !!