September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

ನಡ: ನಾಡಿನ ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರ ಮಹೋತ್ಸವ ಮಾ.18ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ಆರಂಭಗೊಂಡಿದ್ದು, ಮಾ.22ರಂದು ಬೆಳಗ್ಗೆ ದೇವರ ದರ್ಶನ ಬಲಿ ಉತ್ಸವ, ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಡಾ| ಸತೀಶ್ಚಂದ್ರ ಸುರ್ಯಗುತ್ತು, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಧನಂಜಯ ಅಜ್ರಿ ನಡಗುತ್ತು, ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಾ.18ರಂದು ದೇವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ ಮಹಾಪೂಜೆ ರಾತ್ರಿ ರಂಗಪೂಜೆ ದೇವರ ಉತ್ಸವ ನಡೆಯಿತು. ಮಾ.19 ರಂದು ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ನಿತ್ಯಬಲಿ ಮೊದಲಾದ ಕಾರ್ಯಕ್ರಮಗಳು ಜರುಗಿತು. ಮಾ.20ರಂದು ಮಹಾಪೂಜೆ, ನಿತ್ಯಬಲಿ, ಸಂಜೆ ಸುರ್ಯಗುತ್ತು ಮನೆಯಿಂದ ದೈವಗಳ ಭಂಡಾರ ತರಲಾಯಿತು. ನಂತರ ಉತ್ಸವ ಹೊರಟು ವಸಂತಕಟ್ಟೆ ಪೂಜೆ ಜರುಗಿತು. ಮಾ.21ರಂದು ಸೊಡಬಲಿ ಉತ್ಸವ ಬಳಿಕ ಮಹಾಪೂಜೆ ಜರುಗಿತು.
ರಾತ್ರಿ ಉತ್ಸವ ಹೊರಟು ನೃತ್ಯ ಉತ್ಸವ, ರಥಕಟ್ಟೆ ಪೂಜೆ, ಮಹಾಪೂಜೆ, ಶಯನೋತ್ಸವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

Related posts

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya
error: Content is protected !!