ಉಜಿರೆ: ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಭೇಟಿ ನೀಡಿ ಸರಕಾರಿ ಶಾಲೆಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸೇವೆ ಶ್ಲಾಘನೀಯ. ಇದು ನಿಜವಾದ ಸಮಾಜಸೇವೆ ಎಂದರು.
ಕಳೆದ ಒಂದೂವರೆ ತಿಂಗಳ ಹಿಂದೆ ಶಾಲೆಯನ್ನು ಜೀರ್ಣೋದ್ಧಾರಗೊಳಿಸುವ ನಿಟ್ಟಿನಲ್ಲಿ ಬದುಕು ಕಟ್ಟೋಣ ಬನ್ನಿ ತಂಡ ಹಾಗೂ ಇತರ ಸಂಘ ಸಂಸ್ಥೆಗಳು ಸೇರಿ ಶಾಲೆಯಲ್ಲಿ ಶ್ರಮದಾನದ ಮೂಲಕ ಕೆಲಸ ಪ್ರಾರಂಭಿಸಲಾಗಿತ್ತು. ಕೆಲಸ ಪ್ರಾರಂಭಿಸಿ ಇಂದಿಗೆ 50 ದಿನಗಳು ಮುಗಿಯುವಷ್ಟರಲ್ಲಿ ಹೆಚ್ಚಿನ ಕೆಲಸಗಳು ನಡೆದಿದೆ.
ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಎಸ್.ಡಿ.ಎಂ ಸ್ಪೋರ್ಟ್ಸ್ ವಿದ್ಯಾರ್ಥಿಗಳು, ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರು ಶಾಲೆಯಲ್ಲಿ ಶ್ರಮದಾನ ನಡೆಸಿದರು.
ಈ ಸಂದರ್ಭದಲ್ಲಿ ಪೂರನ್ ವರ್ಮ,ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ,ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ,ಕಾರ್ಯದರ್ಶಿ ವಿದ್ಯಾ,ಎಸ್.ಡಿ.ಎಂ ದೈಹಿಕ ಶಿಕ್ಷಣ ಶಿಕ್ಷಕ ರಮೇಶ್, ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು,ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.