29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೈಂಟರ್ ಕೆಲಸ ಮಾಡುತ್ತಿರುವ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹಸಾವರ ಗಂಭೀರ ಗಾಯಗೊಂಡ ಘಟನೆ ಮಾ. 25ರಂದು ಮಧ್ಯಾಹ್ನ ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿ ಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಸಾವರ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ಎರಡನೇ ಮಗ ಪುರುಷೋತ್ತಮ (19) ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್(17) ಗಂಭೀರ ಗಾಯಗೊಂಡಿದ್ದಾನೆ.

ತೌಫೀಕ್ ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಡಿಕ್ಕಿ ಹೊಡೆದ ಪಿಕಪ್ ವಾಹನ ಸ್ಥಳದಿಂದ ಪರಾರಿಯಾಗಿದ್ದು ,ಬೆಳ್ತಂಗಡಿ ಸಂಚಾರಿ ಪೊಲೀಸರು ಪಿಕಪ್ ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related posts

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya
error: Content is protected !!