ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಕೃಷ್ಣಪ್ರಸಾದ ಉಡುಪರ ನೇತೃತ್ವದಲ್ಲಿ ಮಾ.24ರಂದು ನಡೆಯಿತು.
ಪ್ರಾತ: ಕಾಲ ಸ್ವಸ್ತಿ ಪುಣ್ಯಾಹವಾಚನ, ಬೆಳಗ್ಗೆ ಗಣಹೋಮ, ಅಷ್ಟೋತ್ತರ ಶತಕಲಶ ಪೂಜೆ, ಊರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಚಾಮುಂಡೇಶ್ವರಿಗೆ “ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ಶ್ರೀನಿವಾಸ್ ಮುಡೆತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಬ್ರಹ್ಮಣ್ಯ ನೆಲ್ಲಿತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಮಂಡೆಕರ, ಉಪಾಧ್ಯಕ್ಷ ಹರೀಶ್ ಗೌಡ ಹೊಳೆಗಂಡಿ, ಪ್ರಧಾನ ಕಾರ್ಯದರ್ಶಿ ಧರ್ಮಪಾಲಗೌಡ, ಕಾರ್ಯದರ್ಶಿ ಪುನೀತ್ ಗೌಡ, ಕೋಶಾಧಿಕಾರಿ ಮಾಧವ ಪೂಜಾರಿ ದೇನೋಡಿ, ಸದಸ್ಯ ಕುಶಾಲಪ್ಪ ಗೌಡ ಜಿ. ಬದ್ರಿಜಾಲು ಹಾಗೂ ಆಡಳಿತ ಸಮಿತಿಯ ಸದಸ್ಯರು, ಸಲಹೆಗಾರರು, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.