April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

ಬೆಳ್ತಂಗಡಿ: ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಅವರು ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ಮೂವರು ವ್ಯಕ್ತಿಗಳ ಮನೆಗಳಿಗೆ ಮಾ.25ರಂದು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಅವರು ಮದ್ದಡ್ಕದ ಇಸಾಕ್ ಮನೆಗೆ, ಶಿರ್ಲಾಲಿನ ಇಮ್ಮಿಯಾಜ್ ಯಾನೆ ಸಿದ್ದಿಕ್ ಮನೆಗೆ, ಉಜಿರೆಯ ಸಾಹುಲ್ ಹಮೀದ್ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರುಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಯು.ಟಿ ಖಾದರ್ ಇದೊಂದು ಅತ್ಯಂತ ಹೇಯ ಕೃತ್ಯವಾಗಿದೆ. ಈಗಾಗಲೇ ಗೃಹ ಸಚಿವರೊಂದಿಗೆ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಮೃತದೇಹಗಳ ಡಿ.ಎನ್.ಎ ಪರೀಕ್ಷೆ ನಡೆಸಿ ಸಾಧ್ಯವಾದಷ್ಟು ವೇಗವಾಗಿ ಕುಟುಂಬಸ್ಥರಿಗೆ ಹಸ್ತಾಂತರಿಸಲು ಕೋರಿದ್ದೇನೆ ಪೊಲೀಸರು ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಂಡು ಬಳಿಕ ಮೃತದೇಹಗಳನ್ನು ಹಸ್ತಾಂತರಿಸಲಿದ್ದಾರೆ.

ಇದೊಂದು ದೊಡ್ಡ ಮೋಸದ ಜಾಲವಾಗಿದ್ದು ಇದರ ಹಿಂದಿರುವವರ ಬಗ್ಗೆ ಸಮಗ್ರವಾದ ತನಿಖೆಯಾಗಿ ಎಲ್ಲರನ್ನೂ ಕಾನೂನಿನ ಮುಂದೆ ತರುವ ಕಾರ್ಯ ಮಾಡಬೇಕಾಗಿದೆ. ಈಗಾಗಲೇ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಎಲ್ಲ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಇನ್ನು ಯಾರೂ ಇಂತಹ ಜಾಲಕ್ಕೆ ಬಲಿಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಜಿ ಜಿಲ್ಲಾ ಪಂಚಾಯತು ಸದಸ್ಯರುಗಳಾದ ಸಾಹುಲ್ ಹಮೀದ್, ಧರಣೇಂದ್ರ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಗೂ ಇತರ ಮುಖಂಡರುಗಳು ಉಪಸ್ಥಿತರಿದ್ದರು..

Related posts

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya
error: Content is protected !!