25.9 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

ಪುಂಜಾಲಕಟ್ಟೆ : ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಾ.24ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಪಂ. ಮಾಜಿ ಉಪಾಧ್ಯಕ್ಷ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಸ್ಥಾಪಕ ಅಧ್ಯಕ್ಷ ಎಂ. ತುಂಗಪ್ಪ ಬಂಗೇರರ ವಹಿಸಿದರು.

ಕೃಷ್ಣ ಭಟ್ ಕಾರ್ಕಳ ಅವರ ಪೌರೋಹಿತ್ಯದಲ್ಲಿ , 6 ಜೋಡಿ ವಧು-ವರರಿಗೆ ಶಾಸ್ತ್ರೊಕ್ತವಾಗಿ ಸಾಮೂಹಿಕ ವಿವಾಹ ನಡೆಯಿತು.

ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಿಂದ ಮದುವೆ ಮಂಟಪದವರೆಗೆ ವೈಭವಯುತವಾದ ವಧು-ವರರ ದಿಬ್ಬಣ ಮೆರವಣಿಗೆ ನಡೆಯಿತು. ಸಿದ್ದಕಟ್ಟೆ ಪ್ರಾ.ಕೃ.ಸ.ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ದಿಬ್ಬಣ ಮೆರವಣಿಗೆಗೆ ಚಾಲನೆ ನೀಡಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಶಾರದಾ ಅವರು ಉದ್ಘಾಟಿಸಿದರು. ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಗೈದ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಅವರು ಮಾತನಾಡಿ, ಕ್ರೀಡೆ ಮತ್ತು ಸಾಮಾಜಿಕ ಚಟುವಟಿಕೆಯ ಮೂಲಕ ಗುರುತಿಸಿರುವ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್, ದಾನಿಗಳ ಸಹಕಾರದಿಂದ ನಡೆಸುವ ಸಾಮೂಹಿಕ ವಿವಾಹ ಕಾರ್ಯ ಪುಣ್ಯದ ಕೆಲಸ, ಸಾಧಕರನ್ನು ಗುರುತಿಸಿ ಸಮ್ಮಾನಿಸುತ್ತಿರುವುದು ಅಭಿನಂದನೀಯವಾಗಿದೆ ಎಂದರು. ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ದ.ಕ.ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಸಹಕಾರ ರತ್ನ ಲ.ಎ. ಸುರೇಶ್ ರೈ ಮಾತನಾಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಕಕ್ಯಪದವು ನಾರಾಯಣ ಶೆಟ್ಟಿ , ಉದ್ಯಮಿ ಜಯಚಂದ್ರ ಬೊಳ್ಮಾರ್, ಮಾವಿನಕಟ್ಟೆ ಉದ್ಯಮಿ ಅಬ್ದುಲ್ ಕುಂಞಿ, ಬೆಳ್ತಂಗಡಿ ಮಂಜುಶ್ರೀ ಜೆಸಿಐ ಅಧ್ಯಕ್ಷ ರಂಜಿತ್ ಎಚ್.ಡಿ.,ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಸದಸ್ಯ ಮೋಹನದಾಸ ಕೊಟ್ಟಾರಿ, ಗುತ್ತಿಗೆದಾರ ಮೋಹನ್ ಶೆಟ್ಟಿ ನರ್ವಲ್ದಡ್ಕ, ಲ್ಯಾಂಪ್ ಸೊಸೈಟಿ ಅಧ್ಯಕ್ಷ ಸುಂದರನಾಯ್ಕ್, ಕೇರಳ ರಾಜ್ಯ ತುಳುಸಾಹಿತ್ಯ ಅಕಾಡೆಮಿ ಸದಸ್ಯ ಅಜಿತ್ ಕುಮಾರ್ , ಬಡಗಕಜೆಕಾರು ಗ್ರಾ.ಪಂ. ಅಧ್ಯಕ್ಷ ದೇವದಾಸ ಅಬುರ, ಉದ್ಯಮಿ ಇರ್ವತ್ತೂರು ಶೇಖರ ಪೂಜಾರಿ, ಪಿಲಾತಬೆಟ್ಟು ಪ್ರಾ.ಕೃ.ಸ.ಸಂಘದ ಉಪಾಧ್ಯಕ್ಷ ರವಿಶಂಕರ ಹೊಳ್ಳ, ಲಕ್ಷ್ಮೀಶ್ ಉಡುಪಿ, ಶಂಕರ ಶೆಟ್ಟಿ ಬೆದ್ರಮಾರ್,ಗಿರೀಶ್ ಸಾಲ್ಯಾನ್ ಹೆಗ್ಡೆಬೆಟ್ಟು ಗುತ್ತು, ,ಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಸಂಚಾಲಕ ರಾಜೇಶ್ ಪಿ.ಪುಂಜಾಲಕಟ್ಟೆ, ಗೌರವಾಧ್ಯಕ್ಷ ಅಬ್ದುಲ್ಲಾ ಪಿ., ಕಾರ್ಯದರ್ಶಿ ಜಯರಾಜ್ ಅತ್ತಾಜೆ, ಮಾಜಿ ಅಧ್ಯಕ್ಷ ಮಾಧವ ಬಂಗೇರ, ಕ್ರೀಡಾ ಸಂಚಾಲಕ ಅಬ್ದುಲ್ ಹಮೀದ್ , ಹರೀಶ್ಚಂದ್ರ ಶೆಟ್ಟಿಗಾರ್ ಉಪಸ್ಥಿತರಿದ್ದರು.

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ನೂತನ ವಧು-ವರರಿಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ತುಂಬೆ(ಶಿಕ್ಷಣ ) , ಅನ್ವೇಷ್ ಆರ್.ಶೆಟ್ಟಿ (ಯಕ್ಷಗಾನ), ಸದಾನಂದ ಅಮೀನ್ ಮಲ್ಪೆ (ಉದ್ಯಮ),ರಾಜು ಮಣಿಹಳ್ಳ(ದೈವ ನರ್ತನ), ಹಂಝ ಬಸ್ತಿಕೋಡಿ(ಸಮಾಜ ಸೇವೆ) ಅವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮನೋಜ್ ಕನಪಾಡಿ(ಕಲೆ),ಭಾಸ್ಕರ ರಾವ್‌ಬಿ.ಸಿ.ರೋಡ್(ಸಂಗೀತ) ,ಹೇಮಚಂದ್ರ ಸಿದ್ದಕಟ್ಟೆ( ಸಂಘಟನೆ), ಸಂದೀಪ್ ಸಾಲ್ಯಾನ್(ಪತ್ರಕರ್ತ), ಚಂದ್ರಪ್ಪ ಮದ್ದಡ್ಕ (ಶಿಕ್ಷಣ)ಅವರಿಗೆ ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಮೋಹನದಾಸ ಕೊಟ್ಟಾರಿ, ಯಕ್ಷವಾಸ್ಯಂ ಸಂಚಾಲಕಿ ಸಾಯಿಸುಮ ನಾವಡ ಕಾರಿಂಜ ಅವರನ್ನು ಅಭಿನಂದಿಸಲಾಯಿತು. ಕುಣಿತ ಭಜನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ.ಸ್ವಾಗತಿಸಿದರು. ಕಲಾವಿದ ಎಚ್.ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪುಂಜಾಲಕಟ್ಟೆ ನಾರಾಯಣ ಗುರು ವಸತಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು,

Related posts

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ