April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಪುಂಜಾಲಕಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ.25 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿ, ಮಡಂತ್ಯಾರು ಗ್ರಾಮ ಪಂಚಾಯತ್, ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗ, ಮತದಾರ ಸಾಕ್ಷರತಾ ಸಂಘ, ಮಾನವಿಕ ಸಂಘ ಇದರ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಮಾಧವ ಎಂ. ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಜಾಗೃತಿ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್, ತಾಲೂಕು ಮಟ್ಟದ ಸ್ವೀಪ್ ತರಬೇತುದಾರ ರವಿಕುಮಾರ್ ಬಿ.ಆರ್., ಮಡಂತ್ಯಾರು ಗ್ರಾ.ಪಂ ಕಾರ್ಯದರ್ಶಿ ಮೊರ್ಲಿನ್ ಕ್ರಿಸ್ತೀನ್ ಡಿ.ಸೋಜಾ, ತಾಲೂಕು ನರೇಗಾ ಐಇಸಿ ಸಂಯೋಜಕರು ವಿನಿಷ ಹಾಗೂ ಕಾಲೇಜಿನ ಇ.ಎಲ್.ಸಿ ಸಂಚಾಲಕರಾದ ಶೇಖರ್ ಮತ್ತು ಸಹ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಭುತ್ವದ ಈ ಚುನಾವಣಾ ಹಬ್ಬದಲ್ಲಿ ಯುವ ಮತ್ತು ಭವಿಷ್ಯದ ಮತದಾರರ ಮಹತ್ವ ಹಾಗೂ ತಾಲೂಕು ಮತ್ತು ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿ ಎಲ್ಲರ ಸಹಕಾರ ಕೋರಿದರು.

Related posts

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya
error: Content is protected !!