ಬೆಂಗಳೂರು: ಸರ್ಕಾರ ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ನೀಡಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು : 1. ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. 2. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. 3. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. 4. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. 5. ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು: 1. ಮತದಾರರ ಗುರುತಿನ ಚೀಟಿ 2. ವಯಸ್ಸಿನ ಪ್ರಮಾಣಪತ್ರ 3. ಆಧಾರ್ ಕಾರ್ಡ್ 4. ಚಾಲನಾ ಪರವಾನಿಗೆ 5. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 6. ಮೊಬೈಲ್ ನಂಬರ್ 7.ಸ್ವಯಂ ಘೋಷಿತ ಪ್ರಮಾಣಪತ್ರ