September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೈಂಟರ್ ಕೆಲಸ ಮಾಡುತ್ತಿರುವ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹಸಾವರ ಗಂಭೀರ ಗಾಯಗೊಂಡ ಘಟನೆ ಮಾ. 25ರಂದು ಮಧ್ಯಾಹ್ನ ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿ ಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಸಾವರ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ಎರಡನೇ ಮಗ ಪುರುಷೋತ್ತಮ (19) ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್(17) ಗಂಭೀರ ಗಾಯಗೊಂಡಿದ್ದಾನೆ.

ತೌಫೀಕ್ ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಡಿಕ್ಕಿ ಹೊಡೆದ ಪಿಕಪ್ ವಾಹನ ಸ್ಥಳದಿಂದ ಪರಾರಿಯಾಗಿದ್ದು ,ಬೆಳ್ತಂಗಡಿ ಸಂಚಾರಿ ಪೊಲೀಸರು ಪಿಕಪ್ ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related posts

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಗೊಂಡ ಬಜಿಲ ಸ. ಶಾಲೆಯ ಶಿಕ್ಷಕಿ ಜಯಶ್ರೀ ಕೆ ಇವರಿಗೆ ಪೋಷಕರಿಂದ ಬೀಳ್ಕೊಡುಗೆ, ಕಂಪ್ಯೂಟರ್ ಹಸ್ತಾಂತರ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಮಂಡ್ಯ ಮದ್ದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ ಗ್ರಾಮಾಡಳಿತಾಧಿಕಾರಿ ಜಯಚಂದ್ರ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!