March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾ.25 ರಂದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು .ಮತ್ತೊಬ್ಬ ಗಂಭೀರ ಗಾಯಗೊಂಡಿದ್ದ ಸಹಸವಾರ ಕೂಡ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಾನೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಮಾ.25 ರಂದು ಎದುರಿನಿಂದ ಬರುತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿ ಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಸವಾರ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ್ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ಎರಡನೇ ಮಗ ಪುರುಷೋತ್ತಮ (19) ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್(17) ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಮಾ.26 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಅಪಘಾತ ಬಳಿಕ ಉಜಿರೆಯ ಪಿಕಪ್ KA-19-AE-3490 ವಾಹನ ಸಮೇತ ಪರಾರಿಯಾಗಿದ್ದು. ಬಳಿಕ ಸಂಜೆ ವೇಳೆ ಸಂಚಾರಿ ಪೊಲೀಸ್ ಠಾಣೆಗೆ ವಾಹನವನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related posts

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!