24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

ನಡ : ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯತ್ ನಡ, ಮತದಾರರ ಸಾಕ್ಷರತಾ ಸಂಘ ಹಾಗೂ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ನಡ ಇವರ ಸಹಯೋಗದಲ್ಲಿ ಮಾ.22 ರಂದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ನಡ ಗ್ರಾಮ ಪಂಚಾಯಿತಿಯ ಅಂಬೇಡ್ಕರ್ ಸಭಾಭವನದವರೆಗೆ ಮತದಾರರ ಜಾಗೃತಿ ಜಾಥಾವನ್ನು ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗೀಶ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸ್ವೀಪ್ ಸಮಿತಿ ಸದಸ್ಯರುಗಳಾದ ಶ್ರೀಮತಿ ದಿವ್ಯಾ, ಶ್ರೀಮತಿ ಶುಭ ಹಾಗೂ ಶಿವಪುತ್ರ ಸುಣಗಾರ ಮತದಾನದ ಮಹತ್ವದ ಬಗ್ಗೆ ವಿವರಿಸಿದರು.

ಶ್ರೀಮತಿ ಶಿಲ್ಪಾ ಡಿ. ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ಉಪಸ್ಥಿತರಿದ್ದರು. ಕಿರಣ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಊರ ಮತದಾರರು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya
error: Content is protected !!