23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮೂವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯರುಗಳಾದ ಗೋಪಾಲ ಭಂಡಾರಿ ಹಾಗೂ ಹರೀಶ್ ಕುಮಾರ್ ಇವರನ್ನು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಅವರ ಮುಖಂಡರ ನಿಯೋಗ ಭೇಟಿಯಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.

ಅದಲ್ಲದೆ ಮೃತದೇಹದ ಡಿಎನ್‌ಎ ಪರೀಕ್ಷೆ ಮಾಡಿ ಆದಷ್ಟು ಬೇಗ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ಮಾನ್ಯ ಪರಿಷತ್ ಸದಸ್ಯರು ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ಒದಗಿಸುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಭಯ ಚಂದ್ರ ಜೈನ್, ಕಾಂಗ್ರೆಸ್ ಮುಖಂಡರಾದ ರಂಜನ್ ಗೌಡ ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯರ ಭೇಟಿಯಾದ ಎಸ್‌ಡಿಪಿಐ ನಿಯೋಗದಲ್ಲಿ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ನಿಸಾರ್ ಕುದ್ರಡ್ಕ, ನಿಜಾಮ್ ಕಟ್ಟೆ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!