25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆಯು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ‌ ಸೇವಾ ಸಂಘದ ಸಭಾಭವನದಲ್ಲಿ ಮಾ27 ರಂದು ನಡೆಯಿತು.

ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ನೇರವೇರಿಸಿ ಮಾತನಾಡಿ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ನ್ನು ಹಗಲಿರುಳು ದುಡಿದು ಗೆಲ್ಲಿಸುವ ಕೆಲಸ ಕಾಂಗ್ರೇಸ್ ಕಾರ್ಯಕರ್ತರು ಮಾಡಬೇಕಿದೆ.ಇನ್ನೊಮ್ಮೆ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಇರಲ್ಲ. ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರ ಸದೃಡವಾಗಿದ್ದು ಜಿ.ಎಸ್. ಟಿ ಕಟ್ಟುವುದರಲ್ಲಿ ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕಾರ್ಯಕರ್ತರಲ್ಲಿ ಏನಾದರೂ ಭಿನ್ನಾಭಿಪ್ರಾಯವಿದ್ದರೇ ಭಿನ್ನಾಭಿಪ್ರಾಯಕ್ಕೂ ಪಕ್ಷಕ್ಕೂ ಯಾವುದೇ ಸಂಭಂಧವಿಲ್ಲ. ಪಕ್ಷ ಬೇರೆ, ಭಿನ್ನಾಭಿಪ್ರಾಯ ಬೇರೆ ಎಂದರು.

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಮಾತನಾಡಿ ಕಳೆದ 33 ವರ್ಷಗಳಿಂದ ಕಾಂಗ್ರೇಸ್ ಪಕ್ಷದ ಲೋಕಸಭಾ ಸದಸ್ಯರಿಲ್ಲದ ಹಸಿವನ್ನು ಈ ಬಾರಿ ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವ ಸಂಕಲ್ಪ ಮಾಡಬೇಕಿದೆ.ಮತ್ತೊಮ್ಮೆ ಸಾಮರಸ್ಯದ ಗತವೈಭವನ್ನು ಸ್ಥಾಪಿಸುವ ಎಂದರು.

ಸಭೆಯ ಅಧ್ಯಕ್ಷತೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ,ಚುನಾವಣಾ ಉಸ್ತುವಾರಿ ರಕ್ಷಿತ್ ಶಿವರಾಮ್ ವಹಿಸಿದ್ದರು.

ವೇದಿಕೆಯಲ್ಲಿ ಜಿಲ್ಲಾ ಚುನಾವಣಾ ಉಸ್ತುವಾರಿ, ಮಾಜಿ ಸಚಿವ ರಮಾನಾಥ ರೈ,ಮಾಜಿ ಸಚಿವ ಗಂಗಾಧರ ಗೌಡ,ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಗೌಡ,ಕೆಪಿಸಿಸಿ ಸದಸ್ಯ ರಾಜ್ ಶೇಖರ್ ಅಜ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜನ್ ಜಿ ಗೌಡ, ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಎಸ್ಸಿ ಜಿಲ್ಲಾ ಘಟಕದ ಅಧ್ಯಕ್ಷ ಶೇಖರ್ ಕುಕ್ಕೇಡಿ, ಮಹಿಳಾ ಘಟಕದ ಅಧ್ಯಕ್ಷರಾದ ಲೋಕೇಶ್ವರಿ ವಿನಯಚ್ಚಂದ್ರ,ನಮಿತಾ, ವಂದನಾ ಭಂಡಾರಿ,ಇಸ್ಮಾಯಿಲ್ ಪೆರಿಂಜೆ, ಚಾರ್ಮಾಡಿ ಹಸನಬ್ಬ,ಯೂತ್ ಕಾಂಗ್ರೇಸ್ ಅಧ್ಯಕ್ಷ ಹಾಗೂ ಪಕ್ಷದ ನಾಯಕರು ಉಪಸ್ಥಿತರಿದ್ದರು .

ಕಾಂಗ್ರೇಸ್ ಪಕ್ಷಕ್ಕೆ ಮಾಲಾಡಿ ಗ್ರಾ.ಪಂ ಉಪಾಧ್ಯಕ್ಷೆ ಸೆಲೆಸ್ಟಿನ್ ಡಿಸೋಜಾ,ಪಡಂಗಡಿ ಗ್ರಾ.ಪಂ ಸದಸ್ಯೆ ಕವಿತಾ ಮೋನಿಸ್ ಹಾಗೂ ಹೃಷಿಕೇಶ್ ಜೈನ್, ಮುನೀರ್ ಸೇರ್ಪಡೆಗೊಂಡರು.

ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸತೀಶ್ ಬಂಗೇರ ಕಾಶಿಪಟ್ಣ ಸ್ವಾಗತಿಸಿದರು.

Related posts

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya
error: Content is protected !!