25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ, ಯುವ ರೆಡ್ ಕ್ರಾಸ್ ಘಟಕ , ರೋವರ್ಸ್ ರೆಂಜರ್ಸ್ ಘಟಕಗಳ ಸಂಯೋಗದಲ್ಲಿ ಪ್ಲೇಸ್ಮೆಂಟ್ ಸೆಲ್ನ ಜಂಟಿ ಆಶ್ರಯದಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿ ಸ್” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು .

ಕಾರ್ಯಕ್ರಮದಲ್ಲಿ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾಲಯದ ಸುರೇಶ್ ರಾಜ್ ಹಾಗೂ ವೆಂಕಟೇಶ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಪ್ರಸ್ತುತ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಹೊಸ ರೀತಿಯ ತಾಂತ್ರಿಕ ಮತ್ತು ವಿಶ್ಲೇಷಣಾತ್ಮಕ ಕೌಶಲ್ಯಗಳನ್ನು ರೂಡಿಸಿಕೊಂಡಾಗ ಮಾತ್ರ ಉದ್ಯೋಗ ಪಡೆಯಲು ಸಾಧ್ಯ ಎಂದು ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಪ್ರೊಫೆಸರ್ ಪದ್ಮನಾಭ ಕೆ, ಪ್ರೊಫೆಸರ್ ಸುರೇಶ್ ವಿ ಹಾಗೂ ರೋವರ್ಸ್ ರೆಂಜರ್ಸ್ ಘಟಕಗಳ ಡಾ. ರವಿ ಎಂ ಎನ್, ಪ್ರೊಫೆಸರ್ ರಾಜೇಶ್ವರಿ ಎಚ್ಎಸ್ ಹಾಗೂ ಬೋಧಕ ವರ್ಗದವರು ಉಪಸ್ಥಿತರಿದ್ದರು. ಕುಮಾರಿ ಪವಿತ್ರ ಸ್ವಾಗತಿಸಿ, ಅಶ್ವಿನಿ ವಂದನಾರ್ಪಣೆ ಮಾಡಿದರು. ಕುಮಾರಿ ಪೂರ್ಣಿಮಾ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

Related posts

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya
error: Content is protected !!