23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಐಟಿಐ ಕಾಲೇಜು ಮಾಲಾಡಿಯಲ್ಲಿ ಮಾ. 27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಾ.ಸ್ವೀಪ್ ಸಮಿತಿಯ ಅಧ್ಯಕ್ಷ ವೈಜಣ್ಣ , ಕಾಲೇಜಿನ ಪ್ರಾಂಶುಪಾಲರಾದ ರಮೇಶ್ , ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್ ,
ತಾ.ಪಂ.ಅಧೀಕ್ಷಕರಾದ ಡಿ. ಪ್ರಶಾಂತ್ ಮಾಲಾಡಿ ಗ್ರಾ.ಪಂ ನ ಕಾರ್ಯದರ್ಶಿ ಯಶೋಧರ ಶೆಟ್ಟಿ ಹಾಗೂ ನರೆಗಾ ಯೋಜನೆಯ ಐಇಸಿ ಸಂಯೋಜಕರಾದ ವಿನಿಷ ಹಾಗೂ 130 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗುವುದು ಪ್ರಜಾಪ್ರಭುತ್ವದ ಚುನಾವಣಾ ಹಬ್ಬದಲ್ಲಿ ಯುವ ಮತದಾರರು ತಮ್ಮ ತಮ್ಮ ಕುಟುಂಬದ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಖಚಿತಪಡಿಸಿಕೊಂಡು ತಪ್ಪದೇ ಮತದಾನದಲ್ಲಿ ಭಾಗವಹಿಸುವಂತೆ ಮಾಡುವ ಮೂಲಕ ತಾಲೂಕು ಮತ್ತು ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರು ಪ್ರಮುಖ ಪಾತ್ರ ವಹಿಸಬೇಕೆಂದು ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿ ಎಲ್ಲರ ಸಹಕಾರ ಕೋರಿದರು.

Related posts

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!