April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

ಉಜಿರೆ: ನಾವು ಕಲಿಯುವಂತ ವಿಷಯವನ್ನು ಪ್ರಾಯೋಗಿಕವಾಗಿ ಆಳವಡಿಸಿದಾಗ ನಮ್ಮ ಜ್ಞಾನ ವೃದ್ಧಿಯಾಗುತ್ತಿದೆ. ಇದನ್ನು ನಮ್ಮಿಂದ ಕಸಿದುಕೊಳ್ಳಲು ಯಾರಿಂದಲೂ ಅಸಾಧ್ಯ. ಇದರಿಂದ ನಾವು ಜೀವನದಲ್ಲಿ ಉತ್ತುಂಗಕ್ಕೆ ಏರಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರಿನ ಇಸಿ ವಿಭಾಗದ ಸಹಾಯಕ ಪ್ರಾಧ್ಯಪಕ ಡಾ| ಮಹಾಂತೇಶ್ ಚೌಧರಿ ಹೇಳಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಇ ಸಿ ವಿಭಾಗದಿಂದ ಕಾಲೇಜಿನಲ್ಲಿ ಹಮ್ಮಿಕೊಂಡ ಸರ್ಕ್ಯುಟ್ ಎಕ್ಸ್ ಪೋ 2024 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂತೋಷ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಎಸ್.ಡಿ.ಎಮ್. ಪಾಲಿಟೆಕ್ನಿಕ್ ಹಳೆಯ ವಿದ್ಯಾರ್ಥಿ ಅನ್ವಿನ್ ನಾಯ್ಕ ಅಸಿಸ್ಟೆಂಟ್ ಮ್ಯಾನೇಜರ್ ಲೆಕ್ಸಾ ಲೈಟಿಂಗ್‌ ಟೆಕ್ನೊಲೋಜಿಸ್ ಪ್ರೆರ್ವೈಟ್ ಲಿಮಿಟೆಡ್ ಮೂಡಬಿದ್ರೆ ಇವರು ತಮ್ಮ ಅನುಭವವನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು. ಕಾಲೇಜು ವ್ಯವಸ್ಥಾಪಕ ಚಂದ್ರನಾಥ ಜೈನ್, ವಿಭಾಗ ಮುಖ್ಯಸ್ಥೆ ಮೇರಿ ಸ್ಮಿತಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳೀಗೆ ರೋಬೋ ರೇಸ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸ್ನೇಹಾ ಇ.ಆರ್ ಸ್ವಾಗತಿಸಿದರು. ಜೀವನ್ ಕೆ.ವಿ ನಿರೂಪಿಸಿ, ಅನನ್ಯಾ ವಂದಿಸಿದರು.

Related posts

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!