23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಕಾಯಿದೂಪ -18.386, ಹಲಸು-1.353ಘ.ಮೀ., ಹೆಬ್ಬಲಸು-20.277ಘ.ಮೀ., ಚೇರೆ-೦.836ಘ.ಮೀ., ಕಾಡು ಜಾತಿ 1.235, ಸಹಿತ ಒಟ್ಟು 42.114 ಘನ ಮೀಟರ್ ಮರ ಹಾಗೂ 15000 ಘನ ಮೀಟರ್ ಕಟ್ಟಿಗೆ ವಶಪಡಿಸಿಕೊಳ್ಳಲಾಗಿದ್ದು ಇದರ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀರ್, ಚಿಬಿದ್ರೆ ಗ್ರಾಮದ ಮೊಹಮ್ಮದ್ ರಫೀಕ್, ಮಂಗಳೂರು ಬಂದರ್‌ನ ಭರತ್ ಕುಮಾರ್ ಕೊಠಾರಿ ಹಾಗೂ ಎಸ್ಟೇಟ್ ಮ್ಯಾನೇಜರ್ ನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.ಎಸಿಎಫ್ ಶ್ರೀಧರ್ ಪಿ., ಬೆಳ್ತಂಗಡಿ ಆರ್ ಎಫ್ ಒ ಮೋಹನ್ ಕುಮಾರ್ ಬಿ.ಜಿ. , ಡಿ ಆರ್ ಎಫ್ ಒ ಯತೀಂದ್ರ ಹಾಗೂ ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಶಾಂತಶ್ರೀ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಆಯ್ಕೆ

Suddi Udaya

ಶಿಬಾಜೆ ಜನಸ್ಪಂದನ ಸಭೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya
error: Content is protected !!