24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

ಶಿರ್ಲಾಲು : ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು-ಶಿರ್ಲಾಲು ಶ್ರೀ ದೇವಿ ಮಹಿಳಾ ಕೇಂದ್ರ ಬದ್ಯಾರು-ಶಿರ್ಲಾಲು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಶಿರ್ಲಾಲು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ ಎ.15 ರಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ನಲ್ಲಿ ನಡೆಯಲಿದೆ.

ಬೆಳಿಗ್ಗೆ ಪೂಜೆ, ಏಕಾಹ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ತೀರ್ಥಪ್ರಸಾದ, ಅನ್ನಸಂತರ್ಪಣೆ, ಸಂಜೆ ಬೆಳ್ಳಿಹಬ್ಬದ ಕಾರ್ಯಕ್ರಮ , ಸಂಜೆ 6.00 ಭಜನಾ ಕಮ್ಮಟೋತ್ಸವ ನಡೆಯಲಿದೆ.

ಸಂಜೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಪಾಂಗಾಲ್ದಾಡಿ ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಾಣ್ಣಯ ತಂತ್ರಿಗಳು ಆಶೀರ್ವಚನ ನೀಡಲಿದ್ದಾರೆ.

ಉದ್ಘಾಟನೆಯನ್ನು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ। ಪದ್ಮಪ್ರಸಾದ ಅಜಿಲರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಜಗನ್ನಾಥ ಕುಲಾಲ್ ಬೈರೊಟ್ಟು ವಹಿಸಲಿದ್ದಾರೆ ಹಾಗೂ ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!