25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯು ಮಾ.27ರಂದು ನಡೆಯಿತು.
ಸಭೆಯಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಾಸ್ತಾವಿಕ ಮಾತನಾಡಿ ಲೋಕಸಭಾ ಚುನಾವಣೆ ಪೂರ್ವಭಾವಿ ಬಗ್ಗೆ ಚುನಾವಣೆ ಪ್ರಚಾರ ನಡೆಸುವ ಬಗ್ಗೆ ವಿವರಿಸಿದರು.
ಈ ವೇಳೆ ಶಾಸಕ ಹರೀಶ್ ಪೂಂಜ ಮಾತನಾಡಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ದಕ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅತೀ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಲು ಕರೆ ಕೊಟ್ಟರು ಮತ್ತು ಮಾ. 30 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಲಿರುವ ಬೆಳ್ತಂಗಡಿ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ನಡೆಸುವ ಬಗ್ಗೆ ತಿಳಿಸಿ ಕಾರ್ಯಕರ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆಕೊಟ್ಟರು.

ಬಿಜೆಪಿ ದಕ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು ಮತ್ತು ವಸಂತಿ ಮಚ್ಚಿನ ಉಪಸ್ಥಿತರಿದ್ದರು ಹಾಗೂ ಮಂಡಲ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya
error: Content is protected !!