25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

ಉಜಿರೆ : “ಸ್ವಾರ್ಥವಿಲ್ಲದೆ ಸೇವೆ ಮಾಡುವವರು ನಮ್ಮ ಸ್ಕೌಟ್ ವಿದ್ಯಾರ್ಥಿಗಳು. ದೇವರಿಗೆ, ಜನರಿಗೆ ಮತ್ತು ದೇಶಕ್ಕಾಗಿ ನಿಸ್ವಾರ್ಥ ಸೇವೆ ಮಾಡುವವರು ಇವರು” ಎಂದು ಮುಂಡತ್ತೋಡಿ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಸೇವಂತಿ. ಬಿ ಹೇಳಿದರು.


ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಆಯೋಜಿಸಿದ್ದ ಸ್ಕೌಟ್ ಗೈಡ್ ಬೇಸಿಗೆ ಶಿಬಿರದ ಉದ್ಘಾಟಕರಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಭಾರತ್ ಸ್ಕೌಟ್ ಆಂಡ್ ಗೈಡ್ಸ್ ರಾಜ್ಯ ಸಹಾಯಕ ಸಂಘಟನ ಆಯುಕ್ತರಾದ ಭರತ್ ರಾಜ್ ಶಿಬಿರ ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.
ಎಸ್.ಡಿ.ಎಮ್ ಪದವಿ ಕಾಲೇಜಿನ ರೋವರ್ ರೇಂಜರ್ ವಿದ್ಯಾರ್ಥಿಗಳ ಸಹಕಾರದೊಂದಿಗೆ ಶಾಲಾ ಸ್ಕೌಟ್ ಗೈಡ್ ಶಿಕ್ಷಕ ಶಿಕ್ಷಕಿಯರು ಕಾರ್ಯಕ್ರಮ ಆಯೋಜಿಸಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!