April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಮಡಂತ್ಯಾರು : ಮಾಲಾಡಿ ಗ್ರಾಮದ ವಿದ್ಯಾ ನಗರ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ನಾಪತ್ತೆಯಾಗಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸದ್ರಿಯವರ ಸಹೋದರ ರಮೇಶ್ ಎಂಬವರು ನೀಡಿದ ದೂರಿನಲ್ಲಿ ಸುಮಾರು 6 ವರ್ಷಗಳಿಂದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿರುವ. ಲಕ್ಷ್ಮೀನಾರಾಯಣ ಅವರು ಮಾ. 27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಅಮ್ಟಾಡಿ ಪಂಚಾಯತ್‌ ನಲ್ಲಿ ವಿಚಾರಿಸಿದಾಗ, ಸದ್ರಿಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿರುತ್ತಾರೆ.

ಆದರೆ ಲಕ್ಷ್ಮೀನಾರಾಯಣ ಕೆ ರವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ23/2024ರಂತೆ ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya
error: Content is protected !!