24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮವು ಮಾ.27ರಂದು ನ್ಯಾಯಾಲಯದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೆಳ್ತಂಗಡಿ ತಾ.ಕಾ.ಸೇ.ಸ. ಅಧ್ಯಕ್ಷ ದೇವರಾಜು ಹೆಚ್.ಎಂ. ನೆರವೇರಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಹಿರಿಯ ವಕೀಲರ ಸಮಿತಿ, ವಕೀಲರ ಸಂಘ ಅಧ್ಯಕ್ಷ ಎಲೋಶಿಯಸ್ ಲೋಬೋ ವಹಿಸಿದ್ದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಬೆಳ್ತಂಗಡಿ ಜೆ.ಎಂ.ಎಫ್.ಸಿ ವಿಜಯೇಂದ್ರ ಟಿ. ಹೆಚ್ ವಿಶ್ವ ಜಲ ದಿನಾಚರಣೆ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಬೆಳ್ತಂಗಡಿ ತಾಂ.ಕಾಂ.ಸೇ.ಸಂ ಸದಸ್ಯ ಕಾರ್ಯದರ್ಶಿ ಸಂದೇಶ್ ಕೆ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ., ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಜ್, ಶ್ರೀಮತಿ ಆಶಿತಾ ಎಂ. ಉಪಸ್ಥಿತರಿದ್ದರು.

Related posts

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya
error: Content is protected !!