23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

ವೇಣೂರು: ಮೂಡುಕೋಡಿ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ಮಾಡಿದ ಘಟನೆ ಮಾ.27 ರಂದು ನಡೆದಿದೆ.

ಮೂಡಕೋಡಿ ಗ್ರಾಮದ ಉಮಾಮಹೇಶ್ವರಿ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ, ಆರೋಪಿಯಾದ ಮೂಡುಕೋಡಿ ನಿವಾಸಿ, ಶೇಖರ ಶೆಟ್ಟಿ ಎಂಬಾತನು ಮದ್ಯದ ಬಾಟಲಿಗಳನ್ನು ಇಟ್ಟುಕೊಂಡು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ, ವೇಣೂರು ಪೊಲೀಸ್‌ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ, ಆರೋಪಿತನ ವಶದಲ್ಲಿದ್ದ 1469/- ರೂ ಮೌಲ್ಯದ, ತಲಾ 180 ಎಂ.ಎಲ್. ಮದ್ಯ ತುಂಬಿದ 17 ಸ್ಯಾಚೆಟ್‌ ಗಳು ಹಾಗೂ ತಲಾ 90 ಎಂ, ಎಲ್.‌ ಮದ್ಯ ತುಂಬಿದ 07 ಸ್ಯಾಚೆಟ್‌ ಗಳನ್ನು (3.690 ಲೀಟರ್‌ ಮದ್ಯ) ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ 30/2024 ಕಲಂ: 32, 34 ಅಬಕಾರಿ ಕಾಯ್ದೆ-1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!