April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

ತಣ್ಣೀರುಪಂಥ : ಇಲ್ಲಿಯ ಮಡ್ಯೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಮಾ.27ರಂದು ನಡೆದಿದೆ.

ತಣ್ಣೀರುಪಂಥ ಗ್ರಾಮದ, ಮಡ್ಯೊಟ್ಟು ಎಂಬಲ್ಲಿ ಮಾ.26ರಂದು ದಿವಾಕರ ಶೆಟ್ಟಿ (59 ವರ್ಷ) ರವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ತೋಟದಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡವರನ್ನು ಪುತ್ರ ಭವಂತು ಹಾಗೂ ಅವರ ತಾಯಿ ಹಾಗೂ ಇತರರು ಚಿಕಿತ್ಸೆಗಾಗಿ ಉಪ್ಪಿನಂಗಡಿ ಸರಕಾರಿ ಆಸ್ಪತ್ರೆ, ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯಲ್ಲಿದ್ದವರು ಮಾ.27 ರಂದು ಬೆಳಗ್ಗಿನ ಜಾವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಭವಂತು ಅವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಠಾಣಾ ಯುಡಿಆರ್‌ ನಂಬ್ರ 07/2024 ಕಲಂ: 174 ಸಿಆರ್‌ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya
error: Content is protected !!